ಶೃಂಗೇರಿಯ ಶ್ರೀ ಶಂಕರ ಚಾರ್ಯರ ಪ್ರತಿಮೆಯ ಮೇಲೆ ಹಾರಾಡಿದ ಎಸ್‍ಡಿಪಿಐ ಧ್ವಜ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.13-ಇತಿಹಾಸ ಪ್ರಸಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಶ್ರೀ ಶಂಕರ ಚಾರ್ಯರ ಪ್ರತಿಮೆಯ ಮೇಲೆ ಎಸ್‍ಡಿಪಿಐ ಧ್ವಜ ಹಾರಿಸಿರುವುದು ಬೆಳಕಿಗೆ ಬಂದಿದೆ.

ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಘಟನೆಗೆ ಎಸ್‍ಡಿಪಿಐ ಮೇಲೆ ಅನುಮಾನ ವ್ಯಕ್ತವಾಗಿರುವ ಸಂದರ್ಭದಲ್ಲೇ ಶೃಂಗೇರಿಯ ಶ್ರೀ ಶಂಕರಚಾರ್ಯರ ಪ್ರತಿಮೆ ಮೇಲೆ ಈ ಸಂಘಟನೆಯ ಧ್ವಜವನ್ನು ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಸಂಬಂಧ ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಟ್ವೀಟ್ ಮಾಡಿದ್ದು, ಶೃಂಗೇರಿಯಲ್ಲಿ ಶ್ರೀ ಶಂಕರಚಾರ್ಯರ ಪ್ರತಿಮೆ ಮೇಲೆ ಧ್ವಜ ಹಾರಿಸಿದ್ದಾರೆ ಎಂಬ ವಿಷಯ ತಿಳಿದುಬಂದಿದೆ.

ಈಗಾಗಲೇ ನಾನು ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳ ಜೊತೆ ಮಾತುಕತೆ ನಡೆಸಿ ತನಿಖೆ ನಡೆಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆಯೂ ಸೂಚಿಸಲಾಗಿದೆ. ಈ ಘಟನೆಯಿಂದ ಸಾರ್ವಜನಿಕರು ಉದ್ವೇಗಕ್ಕೆ ಒಳಗಾಗದೆ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Facebook Comments

Sri Raghav

Admin