ಎಸ್ಇಬಿಐನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಸೆಕ್ಯುರಿಟಿ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ಯಲ್ಲಿ ಖಾಲಿ ಇರುವ ) 147 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 07-03-2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 23-03-2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ, ಕಾನೂನು ಪದವಿ, ಕಂಪ್ಯೂಟರ್ ಅಪ್ಲಿಕೇಶನ್ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಫೆಬ್ರವರಿ 29,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಇನ್ನು ಅರ್ಜಿ ಸಲ್ಲಿಸಿದ ನಂತರ ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ /ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮಾರ್ಚ್ 23,2020ರೊಳಗೆ ಪಾವತಿಸಬೇಕಿರುತ್ತದೆ. ಈ ಹುದ್ದೆಗಳಿಗೆ ಆನ್ಲೈನ್ ಸ್ಕ್ರೀನಿಂಗ್ ಪರೀಕ್ಷೆ, ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ https://www.sebi.gov.in/ ಗೆ ಭೇಟಿ ನೀಡಿ ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ

Facebook Comments