ಅಮಿತ್ ಷಾ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಸೂಕ್ತ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಜ.15- ಇದೇ 18 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸುವ ಹಿನ್ನೆಲೆ ನೆಹರೂ ಮೈದಾನದ ಸುತ್ತಲೂ ಸೂಕ್ತ ಪೊಲೀಸ್ ಬಂದೋಬಸ್ತ್ ಜೊತೆಗೆ ಸುರಕ್ಷತೆಯ ದೃಷ್ಠಿಯಿಂದ ಎಲ್ಲ ಕ್ರಮಗಳನ್ನು ತೆಗದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಇದೇ ತಿಂಗಳು 18 ಕ್ಕೆ ಕೇಂದ್ರ ಸಚಿವ ಅಮಿತ್ ಶಾ ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ ಕಾರ್ಯಕ್ರಮಕ್ಕೆ ಬರುವ ಹಿನ್ನೆಲೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಹುಬ್ಬಳ್ಳಿಗೆ ಅಮಿತ್ ಶಾ ಆಗಮನ ಹಿನ್ನೆಲೆ ಕಾಂಗ್ರೆಸ್‍ನಿಂದ ಗೋ ಬ್ಯಾಕ್ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇದು ಪ್ರಜಾಪ್ರಭುತ್ವ ರಾಷ್ಟ್ರ.

ಇಲ್ಲಿ ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ನಾವು ಕಾಂಗ್ರೆಸ್‍ನವರಿಗೆ ಯಾವುದಕ್ಕೂ ಅಡಚಣೆ ಮಾಡಿಲ್ಲ. ಇದು ರಾಜಕೀಯ ಪ್ರೇರಿತ ಪ್ರತಿಭಟನೆ. ಆದ್ದರಿಂದ ಹೀಗಾಗಿ ಇಂತಹ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದರಿಂದ ನಮಗೇನು ತೊಂದರೆ ಇಲ್ಲ. ಕಾರ್ಯಕ್ರಮ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ ಎಂದರು. ಅಹಿತಕರ ಘಟನೆ ನಡೆಯುವಂತೆ ಕಾಂಗ್ರೆಸ್ ಪ್ರತಿಭಟನೆ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ.

ಇನ್ನೂ ನಿನ್ನೆ ಹರಿಹರದಲ್ಲಿ ಸಿಎಂ ರಾಜೀನಾಮೆ ಬೆದರಿಕೆ ವಿಚಾರ ಕುರಿತಂತೆ ಈಗಾಗಲೇ ಸಿಎಂ, ನಿರಾಣಿ ಹಾಗೂ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. ಅದನ್ನ ಮತ್ತೆ ಬೆಳೆಸುವ ಅಗತ್ಯವಿಲ್ಲ. ಸಂಪುಟ ವಿಸ್ತರಣೆ ವಿಚಾರ ಸಿಎಂ ಗೆ ಬಿಟ್ಟದ್ದು ಎಂದರು. ತಮಿಳುನಾಡಿನಲ್ಲಿ ಒಂದು ತಂಡ ಉಗ್ರಗಾಮಿ ಚಟುವಟಿಕೆಯಲ್ಲಿ ಭಾಗಿಯಾಗಿತ್ತು, ಈ ಕುರಿತಂತೆ ಮಾಹಿತಿ ಸಿಕ್ಕ ನಂತರ ರಾಜ್ಯದ ಪೊಲೀಸರು ರಾಜ್ಯದಲ್ಲಿ ಬಂಧಿಸಿದ್ದಾರೆ.

ಇನ್ನಿಬ್ಬರು ಬೇರೆ ರಾಜ್ಯದಿಂದ ಕೇರಳದ ಕನ್ಯಾಕುಮಾರಿಗೆ ಹೋಗಿ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ರು, ಉಗ್ರರ ಜಾಲವನ್ನ ಸಂಪೂರ್ಣ ಭೇದಿಸುವಲ್ಲಿ ರಾಜ್ಯದ ಪೊಲೀಸರು ಶ್ರಮಿಸಲಿದ್ದಾರೆ ಎಂದು ಅವರು ಹೇಳಿದರು.

Facebook Comments

Sri Raghav

Admin