LIVE UPDATES : ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ..!

ಈ ಸುದ್ದಿಯನ್ನು ಶೇರ್ ಮಾಡಿ

Siddagaga-Swamiji

ತುಮಕೂರು,ಜ.21- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ (111)ಶಿವ ಸಾಯುಜ್ಯ ಹೊಂದಿದ್ದಾರೆ.

ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿರುವ ಕೋಟ್ಯಂತರ ಭಕ್ತರನ್ನು ಶ್ರೀಗಳು ಅಗಲಿದ್ದಾರೆ. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಹಳೆಯ ಮಠದಲ್ಲಿ ಚಿಕಿತ್ಸೆ ನೀಡುತ್ತಿದ್ದರೂ ಫಲಕಾರಿಯಾಗದೆ ಇಂದು ಬೆಳಗ್ಗೆ 11.44 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಮಠದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ನಾಳೆ ಸಂಜೆ 4.30 ಶ್ರೀಗಳ ಅಂತಿಮ ಸಂಸ್ಕಾರ ನಡೆಯಲಿದೆ. ಶ್ರೀಗಳ ನಿಧನದ ಗೌರವಾರ್ಥ ಇಂದು ಮತ್ತು ನಾಳೆ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತುಮಕೂರು ಶ್ರೀ ಮಠದ ಆವರಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ನಾಡಿನ ಜನತೆಯ ಪಾಲಿಗೆ ನಡೆದಾಡುವ ದೇವರಾದ ಸಿದ್ದಗಂಗಾಶ್ರೀಗಳಿಗೆ ಉತ್ತಮ ಗೌರವ ಕೊಡಬೇಕಾಗಿದೆ.

ಹಲವಾರು ಮಠಾಧೀಶರು, ಕಿರಿಯ ಸ್ವಾಮೀಜಿಗಳು, ರಾಜ್ಯ, ದೇಶದೆಲ್ಲೆಡೆಯಿಂದ ಹಲವಾರು ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಶಾಂತ ರೀತಿಯಾಗಿ ಅಂತಿಮ ದರ್ಶನ ಪಡೆಯಬೇಕೆಂದು ಮನವಿ ಮಾಡಿದರು. ಶ್ರೀಗಳ ಗೌರವಾರ್ಥ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಿದ್ದಗಂಗಾ ಶ್ರೀಗಳು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅವರು ಪವಾಡ ಪುರುಷರು. ನಾಡಿನ, ದೇಶದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯ ವಿಷಯವನ್ನು ಅತ್ಯಂತ ನೋವಿನಿಂದ ಹೇಳುತ್ತಿದ್ದೇನೆ ಎಂದರು. ಅನಾರೋಗ್ಯಕ್ಕೊಳಗಾಗಿದ್ದ ಶ್ರೀಗಳಿಗೆ ಹಲವು ದಿನಗಳಿಂದ ಉತ್ತಮ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅದು ಫಲಕಾರಿಯಾಗಲಿಲ್ಲ. ಇಂದು ಬೆಳಗ್ಗೆ ಶ್ರೀಗಳು ವಿಧಿವಶವಾಗಿರುವುದನ್ನು ವೈದ್ಯರು ಅಧಿಕೃತವಾಗಿ ತಿಳಿಸಿದರು ಎಂದರು.

# ತುಮಕೂರಿನಿಂದ ಸಿದ್ದಗಂಗಾ ಮಠಕ್ಕೆ 100 ಕೆಎಸ್‌ಆರ್‌ರ್ಟಿಸಿ ಬಸ್
ಬೆಂಗಳೂರು,ಜ.21- ನಡೆದಾಡುವ ದೇವರು, ಸಿದ್ದಗಂಗಾ ಮಠಾಧೀಶರಾದ ಡಾ.ಶ್ರೀ ಶಿವಕುಮಾರ ಸಾಮೀಜಿ ಅವರು ಶಿವೈಕ್ಯರಾಗಿರುವ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು ಅವರ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಇಂದು ಮತ್ತು ನಾಳೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಭಕ್ತಾದಿಗಳ ಅನುಕೂಲಕ್ಕಾಗಿ ನಿಗಮ ವ್ಯಾಪ್ತಿಯ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಬಸ್‍ಗಳನ್ನು ತುಮಕೂರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅದೇ ರೀತಿ ತುಮಕೂರು ನಗರದಲ್ಲಿನ ಬಸ್ ನಿಲ್ದಾಣ, ಎಪಿಎಂಸಿ, ರೈಲ್ವೆ ನಿಲ್ದಾಣ ಹಾಗೂ ಜೂನಿಯರ್ ಕಾಲೇಜಿನಿಂದ ಸಿದ್ದಗಂಗಾ ಮಠಕ್ಕೆ ಕೆಎಸ್‍ಆರ್‍ಟಿಸಿಯ 100ಕ್ಕೂ ಹೆಚ್ಚುವರಿ ಬಸ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

# ನಾಳೆ ಸರ್ಕಾರಿ ರಜೆ ಘೋಷಣೆ
ತುಮಕೂರು ಸಿದ್ದಗಂಗಾ ಶ್ರೀಗಳ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಿಧನದ ಗೌರವಾರ್ಥ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ನಾಳೆ ಸಂಜೆ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಶ್ರೀಗಳ ಸೇವೆ ಅಜರಾಮರ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಸ್ಮರಿಸಿದರು.

# ನಾಳೆ ಅಂತ್ಯಸಂಸ್ಕಾರ
‘ಕ್ರಾಂತಿ ಪುರುಷ’, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತ್ಯಸಂಸ್ಕಾರವನ್ನು ಜ. 22ರಂದು ಸಂಜೆ 4.30ಕ್ಕೆ ಸಿದ್ದಗಂಗಾ ಮಠದ ಆವರಣದಲ್ಲಿಯೇ ನೆರವೇರಿಸಲು ನಿಶ್ಚಯಿಸಲಾಗಿದೆ. ಶ್ರೀಗಳ ಅಂತ್ಯ ಸಂಸ್ಕಾರ ಮಂಗಳವಾರ ಸಂಜೆ 4.30ಕ್ಕೆ ಸಿದ್ದಗಂಗಾ ಮಠದ ಆವರಣದಲ್ಲಿಯೇ ನಡೆಯಲಿದ್ದು, ಅಂತಿಮ ದರ್ಶನಕ್ಕಾಗಿ ಈಗಾಗಲೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾದಿಗಳು ಶಾಂತ ರೀತಿಯಿಂದ ಅಂತಿಮ ದರ್ಶನ ಪಡೆಯಲು ಬ್ಯಾರಿಕೇಡ್ ಗಳನ್ನು ಕೂಡ ನಿರ್ಮಿಸಲಾಗಿದೆ. ಸದ್ಯಕ್ಕೆ ಮಠದೊಳಗೆ ವಿಐಪಿ ಮತ್ತು ವಿವಿಐಪಿಗಳನ್ನು ಮಾತ್ರ ಬಿಡಲಾಗುತ್ತಿದೆ.

# ದೇವೇಗೌಡರ ಸಂತಾಪ
ಬೆಂಗಳೂರು, ಜ.21-ಕಲಿಯುಗದ ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಅಗಲಿಕೆಯಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.  ನಮ್ಮೆಲ್ಲರ ಆರಾಧ್ಯ ದೈವ ಶ್ರೀ ಶಿವಕುಮಾರಸ್ವಾಮೀಜಿಯವರು ಈ ಜಗತ್ತು ಕಂಡ ಜ್ಞಾನ ಭಂಡಾರ.

ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕರೂ ಆದ ಶ್ರೀಗಳ ಸಾನಿಧ್ಯದಲ್ಲಿ ಬೆಳೆದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಮಟ್ಟಕ್ಕೆ ಬೆಳೆದಿದ್ದಾರೆ. ಸ್ವಾಮೀಜಿಯವರು ಈ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಅವರ ಆದರ್ಶ ನಮ್ಮೊಡನೆ ಅಜರಾಮರವಾಗಿರುತ್ತದೆ ಎಂದು ತಿಳಿಸಿದರು. ಶ್ರೀಗಳು ಜನಿಸಿದ ಪುಣ್ಯಭೂಮಿಯಲ್ಲಿ ನಾವೆಲ್ಲ ಜನಿಸಿರುವುದು ನಮ್ಮ ಅದೃಷ್ಟ. ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ನಾವೆಲ್ಲ ಮುಂದೆ ಸಾಗಬೇಕಾಗಿದೆ ಎಂದು ಹೇಳಿದರು.

# ಶತಮಾನದ ಸಂತನ ನಿಧನಕ್ಕೆ ಮೋದಿ ಕಂಬನಿ
ನವದೆಹಲಿ, ಜ.21- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಮಾನದ ಸಂತ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಲಿಂಗೈಕ್ಯವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.  ಡಾ.ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು ಬಡವರು, ದೀನ ದಲಿತರು ಮತ್ತು ದುರ್ಬಲ ವರ್ಗಗಳ ಶಿಕ್ಷಣ ಮತ್ತು ಆರೋಗ್ಯ ಆರೈಕೆಗೆ ಮುಂಚೂಣಿಯಲ್ಲಿದ್ದ ಮಹಾ ಸಂತರು ಎಂದು ಮೋದಿ ಟ್ವೀಟ್‍ನಲ್ಲಿ ಗುಣಗಾನ ಮಾಡಿದ್ದಾರೆ.

ಸಮಾಜ ಸೇವೆ, ಆಧ್ಯಾತ್ಮಿಕ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸೌಲಭ್ಯ ವಂಚಿತರ ಹಕ್ಕುಗಳ ರಕ್ಷಣೆಗಾಗಿ ಉದ್ಧಾತ ಸೇವೆ ಸಲ್ಲಿಸುತ್ತಾ ನಮ್ಮ ಸಂಪ್ರದಾಯದ ಮೌಲ್ಯಗಳನ್ನು ಎತ್ತಿಹಿಡಿದ ಮಹಾಪುರುಷರು ಇವರು ಎಂದು ಪ್ರಧಾನಿ ಬಣ್ಣಿಸಿದ್ದಾರೆ.

Tweet

ಪರಮ ಪೂಜ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಜನರಿಗಾಗಿ ಅದರಲ್ಲೂ ವಿಶೇಷವಾಗಿ ಬಡವರು ಮತ್ತು ದುರ್ಬಲ ವರ್ಗದವರ ಏಳ್ಗೆಗಾಗಿ ಬದುಕಿದ ದೈವ ಸ್ವರೂಪಿಗಳು, ಬಡತನ , ಹಸಿವು ಮತ್ತು ಸಾಮಾಜಿಕ ಅಸಮಾನತೆಯ ನಿರ್ಮೂಲನೆಗಾಗಿ ಅನೇಕ ದಶಕಗಳಿಂದಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡ ಮಹಾನ್ ಸಂತರ ನಿಧನದಿಂದ ನನಗೆ ಅತೀವ ದುಃಖವಾಗಿದೆ ಎಂದು ಮೋದಿ ಸಂತಾಪ ಸೂಚಿಸಿದ್ದಾರೆ.

#  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
ತುಮಕೂರು, ಜ.21-ತುಮಕೂರು ಸಿದ್ದಗಂಗಾ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಿಧನದ ಗೌರವಾರ್ಥ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಸಂಜೆ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಶ್ರೀಗಳ ಸೇವೆ ಅಜರಾಮರ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಸ್ಮರಿಸಿದರು.

Meeting--01

# ಅಭಿನವ ಬಸವಣ್ಣನ ಯುಗಾಂತ್ಯ :
ತುಮಕೂರು,ಜ.21- ಸಿದ್ದಗಂಗಾ ಶ್ರೀಗಳ ನಿಧನ ಎರಡನೇ ಅಭಿನವ ಬಸವಣ್ಣನವರ ಯುಗಾಂತ್ಯವಾದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದರು.  ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಶ್ರೀಗಳು ಇಂದು ನಮ್ಮನ್ನು ಅಗಲಿರುವುದು ಅತೀವ ದುಃಖ ತಂದಿದೆ.  ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

# ನಾನು ಆಘಾತಕ್ಕೀಡಾಗಿದ್ದೇನೆ ಎಂದ ಸಿದ್ದರಾಮಯ್ಯ :
ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದು:ಖತಪ್ತ ಮನಸ್ಸಿನಿಂದ ಪ್ರಾರ್ಥಿಸುತೇನೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ನಾವು ಯಾರೂ ಬಸವಣ್ಣನವರನ್ನು ಕಣ್ಣಾರೆ ನೋಡಿಲ್ಲ, ನಾನು ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಲ್ಲಿ ಬಸವಣ್ಣನನ್ನು ಕಾಣುತ್ತಿದ್ದೆ. ಅವರನ್ನು ”ನಡೆದಾಡುವ ದೇವರು” ಎನ್ನುತ್ತಾರೆ. ನನ್ನ ಪಾಲಿಗೆ ಅವರು ”ನಡೆದಾಡುತ್ತಿದ್ದ ಬಸವಣ್ಣ” ಆಗಿದ್ದರು

ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ಭಯ ನಿಜವಾಗಿದೆ. ಸಾಧನೆಯ ಮೂಲಕ ಲೋಕವನ್ನೇ ಗೆದ್ದಿರುವ ಸ್ವಾಮಿಗಳು ಕೊನೆಗೂ ಸಾವನ್ನು ಗೆಲ್ಲಲಾಗದೆ ಶರಣಾಗಿ ನಮ್ಮನ್ನು ಅನಾಥರಾಗಿಸಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

WhatsApp Image 2019-01-21 at 4.39.57 PM WhatsApp Image 2019-01-21 at 4.39.57 PM(1) WhatsApp Image 2019-01-21 at 4.39.56 PM(1) WhatsApp Image 2019-01-21 at 4.39.56 PM WhatsApp Image 2019-01-21 at 4.39.55 PM WhatsApp Image 2019-01-21 at 4.39.55 PM(2) WhatsApp Image 2019-01-21 at 4.39.55 PM(1) WhatsApp Image 2019-01-21 at 4.39.54 PM WhatsApp Image 2019-01-21 at 4.39.53 PM WhatsApp Image 2019-01-21 at 4.39.53 PM(1) WhatsApp Image 2019-01-21 at 4.39.52 PM WhatsApp Image 2019-01-21 at 4.39.52 PM(1) WhatsApp Image 2019-01-21 at 4.39.51 PM WhatsApp Image 2019-01-21 at 4.39.51 PM(1) WhatsApp Image 2019-01-21 at 4.39.50 PM WhatsApp Image 2019-01-21 at 4.39.50 PM(2) WhatsApp Image 2019-01-21 at 4.39.50 PM(1) WhatsApp Image 2019-01-21 at 4.39.49 PM WhatsApp Image 2019-01-21 at 4.39.48 PM WhatsApp Image 2019-01-21 at 4.39.48 PM(1) WhatsApp Image 2019-01-21 at 4.39.47 PM WhatsApp Image 2019-01-21 at 4.39.47 PM(1) WhatsApp Image 2019-01-21 at 4.39.46 PM

 

Facebook Comments

Sri Raghav

Admin