ಮನೆಗಳ್ಳರ ಬಂಧನ : 3.30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.30- ಹಾಡಹಗಲೇ ಮನೆಗೆ ನುಗ್ಗಿ ಬೀರುವಿನಲ್ಲಿದ್ದ ಆಭರಣ ಕಳ್ಳತನ ಮಾಡಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ 3.30 ಲಕ್ಷ ಬೆಲೆಬಾಳುವ 66 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಮಾರ್ಚ್ 18ರಂದು ಮನೆಯೊಂದರ ಬೀರುವಿನಲ್ಲಿಟ್ಟಿದ್ದ ಆಭರಣ ಕಳ್ಳತನವಾಗಿದ್ದು, ಇವರ ಮನೆಗೆ ಬಂದಿದ್ದ ಸಂಬಂಧಿಕರು ಕಳವು ಮಾಡಿರಬಹುದೆಂದು ಅನುಮಾನ ವ್ಯಕ್ತಪಡಿಸಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇನ್ಸ್‍ಪೆಕ್ಟರ್ ಲಕ್ಷ್ಮಣ್‍ನಾಯಕ್ ಮತ್ತು ಅವರ ಸಿಬ್ಬಂದಿ ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ 3.30 ಲಕ್ಷ ಬೆಲೆಯ 66 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 

 

Facebook Comments