ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ವಾಪಸ್ ನೀಡಲು ಮುಂದಾದ ಪೊಲೀಸ್ ಇಲಾಖೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ದಂಡ ವಿಧಿಸಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು.

ಇದರ ಬೆನ್ನಲ್ಲೇ ಹೈಕೋರ್ಟ್ ಸೀಜ್ ಆದ ವಾಹನಗಳಿಗೆ ಫೈನ್ ಹಾಕಿ ನಂತರ ಬಿಡುಗಡೆ ಮಾಡುವಂತೆ ಸೂಚಿಸಿದೆ. ಹೈಕೋರ್ಟ್ ನೀಡಿರುವ ಆದೇಶದಲ್ಲಿ ಲಾಕ್‍ಡೌನ್ ವೇಳೆ ಸೀಜ್ ಮಾಡಲಾದ ವಾಹನಗಳಿಗೆ ಫೈನ್ ಹಾಕಿ ರಿಲೀಸ್ ಮಾಡಬೇಕು.

ಅದರಲ್ಲಿ ನಾಲ್ಕು ಚಕ್ರದ ವಾಹನಗಳಿಗೆ ಒಂದು ಸಾವಿರ ದಂಡ ಮತ್ತು ದ್ವಿಚಕ್ರ ಮತ್ತು ಆಟೋ ರಿಕ್ಷಾಗಳಿಗೆ 500 ದಂಡ ವಿಧಿಸಬೇಕು. ಜೊತೆಗೆ ಇನ್ಶೂರೆನ್ಸ್ ಸೇರಿದಂತೆ ವಾಹನದ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ನಂತರ ವಾಹನಗಳನ್ನು ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ.

ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಭಾಸ್ಕರ್ ರಾವ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ತೀರ್ಮಾನದಂತೆ ನಾಳೆಯಿಂದ ಸೀಜ್ ಆಗಿರುವ ವಾಹನಗಳ ಬಿಡುಗಡೆ ಮಾಡಲಾಗುತ್ತದೆ.

ಆದರೆ ಏಕಾಏಕಿ ಜನರು ಬರುವ ಸಾಧ್ಯತೆಗಳು ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಹೀಗಾಗಿ ಕೆಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದ್ದರು.

Facebook Comments

Sri Raghav

Admin