ಪ್ರವಾಹದ ನೀರು ಉಕ್ಕಿ ಹರಿಯುವಾಗ ಸೆಲ್ಫಿ ತೆಗೆದರೆ 6 ತಿಂಗಳು ಜೈಲು..!

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಆ.9- ಪೊಲೀಸ್ ಇಲಾಖೆಯ ಎಚ್ಚರಿಕೆ ಮೀರಿ ನೀರಿನ ಬಳಿ ಸೆಲ್ಫಿ ತೆಗೆಯಲು ಮುಂದಾದುವ ಪುಂಡರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಸಲಾಗುವುದು ಎಂದು ನಾಮ ಫಲಕ ಹಾಕುವಂತೆ ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದ್ದಾರೆ.

ಸಕಲೇಶಪುರ ತಾಲೂಕಿನಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಪ್ರತಿ ವರ್ಷ ಭಾರಿ ಮಳೆಯಾಗುತ್ತಿದ್ದು, ಜನರು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆದರೆ ಕೆಲವೆಡೆ ಯುವಕರು ಉಕ್ಕಿ ಹರಿಯುವ ನದಿಗಳಲ್ಲಿ ಈಜಲು ಅಥವಾ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪುಂಡಾಟ ಮೆರೆಯುತ್ತಾರೆ. ಅಂತಹದ್ದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಈ ಸಂಬಂಧ ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಅವರಿಗೆ ಸೂಚನೆ ನೀಡಿದ್ದೇನೆ. ಅಪಾಯದ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪರಿಹಾರ ಕೇಂದ್ರ ನಿರ್ಮಾಣ ಮಾಡಲಾಗುವುದು. ಕಳೆದ ವರ್ಷ ಮನೆ ಕಳೆದುಕೊಂಡವರಿಗೆ ಈಗಾಗಲೇ 340 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ.

ಸೋಮವಾರ ಪ್ರಧಾನಿ ಮೋದಿಯವರ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಾನು, ಬಸವರಾಜ ಬೊಮ್ಮಾಯಿ ಮಾತನಾಡಲಿದ್ದೇವೆ. ರಾಜ್ಯಕ್ಕೆ ಹೆಚ್ಚಿನ ಮುಂಗಡ ಹಣ ನೀಡುವಂತೆ ಮನವಿ ಮಾಡಲಿದ್ದೇವೆ.

ಇದರಿಂದ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸುಲಭವಾಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ಅಶೋಕ್ ತಿಳಿಸಿದರು.

Facebook Comments

Sri Raghav

Admin