‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿ ಮತ್ತು ಪೋಷಕರೇ ಕಾರಣ’ : ಭಗ್ನ ಪ್ರೇಮಿ ‘ಸೆಲ್ಫೀ’ ಸೂಸೈಡ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಮೇ 18-ಪ್ರೀತಿಸಿದ ಯುವತಿ ಬೇರೊಬ್ಬ ಯುವಕನೊಂದಿಗೆ ಮದುವೆಯಾಗುತ್ತಿರುವುದನ್ನು ತಿಳಿದು ಪ್ರಿಯಕರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಸುವಿನಹಳ್ಳಿ ಗ್ರಾಮದ ಸಿದ್ದರಾಜು(22) ಮೃತಪಟ್ಟ ದುರ್ದೈವಿ. ಮೈಸೂರಿನ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಬೆಳವಾಡಿಯ ಯುವತಿಯನ್ನು ಪ್ರೀತಿಸುತ್ತಿದ್ದನು ಎನ್ನಲಾಗಿದೆ.

ಈ ವಿಷಯ ತಿಳಿದ ಯುವತಿಯ ಪೋಷಕರು ಸಿದ್ದರಾಜು ಜೊತೆ ಜಗಳವಾಡಿ ದಿಗ್ಭಂದನ ವಿಧಿಸಿದ್ದರು. ಇದರಿಂದ ಹೆದರಿದ ಸಿದ್ದರಾಜು ಮೈಸೂರು ಬಿಟ್ಟು ಸ್ವಗ್ರಾಮಕ್ಕೆ ತೆರಳಿ ಮೊಬೈಲ್ ಮೂಲಕ ಯುವತಿ ಜೊತೆ ಸಂಪರ್ಕವಿಟ್ಟುಕೊಂಡಿದ್ದನು.

ಈ ನಡುವೆ ಯುವತಿಗೆ ಬೇರೊಬ್ಬ ಯುವಕನ ಜೊತೆ ಮದುವೆ ನಿಶ್ಚಯವಾಗಿರುವುದನ್ನು ತಿಳಿದ ಸಿದ್ದರಾಜು ಆಕೆಯೊಂದಿಗೆ ಜಗಳವಾಡಿ ಜೊತೆಯಲ್ಲಿ ತೆಗೆಸಿಕೊಂಡಿದ್ದ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದಾನೆ.

ಇದನ್ನು ಗಮನಿಸಿದ ಯುವತಿ ಪೋಷಕರು ಈತನ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಬರುವಂತೆ ಸಿದ್ದರಾಜುಗೆ ಕರೆ ಮಾಡಿದ್ದಾರೆ.

ಇದರಿಂದ ಹೆದರಿದ ಸಿದ್ದರಾಜು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸೆಲ್ಫಿ ವಿಡಿಯೋ ಮಾಡಿ ನನ್ನ ಸಾವಿಗೆ ಪ್ರೀತಿಸಿದ ಯುವತಿ ಹಾಗೂ ಆಕೆಯ ಪೋಷಕರೇ ಕಾರಣ ಎಂದು ಆರೋಪಿಸಿ, ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದವಳಿಗಾಗಿ ಎಲ್ಲವನ್ನೂ ಹಾಗೂ ಎಲ್ಲರನ್ನೂ ಕಳೆದುಕೊಂಡೆ.

ಆಕೆಯನ್ನು ಜೈಲಿಗೆ ಕಳುಹಿಸಿ ಎಂದು ಮನವಿ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin