ಸಿಎಂ ಭೇಟಿಯಾದ ಹಿರಿಯ ನಟಿ ಲೀಲಾವತಿ ಮತ್ತು ವಿನೋದ್ ರಾಜ್, ಕಾರಣವೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

Vinod-Raj--01

ಬೆಂಗಳೂರು. ನ. 7 : ಹಿರಿಯ ನಟಿ ಲೀಲಾವತಿ ಹಾಗೂ ವಿನೋದ್ ರಾಜ್ ಅವರು ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ ಸೋಲದೇವನಹಳ್ಳಿಯನ್ನು ಅರಣ್ಯ ಪ್ರದೇಶವ್ಯಾಪ್ತಿಯಿಂದ ತೆಗೆಯುವಂತೆ ಮನವಿ ಮಾಡಿದರು.

ಇಲ್ಲಿ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರದಿಂದ ಘೋಷಣೆಯಾಗಿದೆ, ಇದರಿಂದ 650 ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ, ದಿನ ನಿತ್ಯ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ, ಲೀಲಾವತಿಯವರೂ ಕೂಡ ಆ ಹಳ್ಳಿ ವ್ಯಾಪ್ತಿಯಲ್ಲಿದ್ದಾರೆ, ಹೀಗಾಗಿ ಸಿಎಂ ಭೇಟಿ ಮಾಡಿದ್ದಾರೆ.

ನನಗೆ 83 ವರ್ಷ ವಯಸ್ಸಾಗಿದೆ, ನಾವು ಇರುವ ಪ್ರದೇಶದಲ್ಲಿ ಕಾಡು ಪ್ರಾಣಿ ತಂದು ಬಿಡುತ್ತಾರೆ,  ಇದು ನಮಗೆ ಸಮಸ್ಯೆಯಾಗುತ್ತಿದೆ ಎಂದು ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಅವರು ಸಿಎಂ ಬಳಿ ನೋವು ತೋಡಿಕೊಂಡರು.

Vinod-Raj-Leelavathi

Facebook Comments