ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ, ಗಣ್ಯರ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು, ಜ.27-ಜೆಡಿಎಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ (81) ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ಕೊನೆಯುಸಿರೆಳೆದರು.

ಅಮರನಾಥ ಶೆಟ್ಟಿ ಅವರು ಹಲವು ದಶಕಗಳಿಂದ ಜನತಾ ಪರಿವಾರದಲ್ಲೇ ಸಕ್ರಿಯರಾಗಿದ್ದರು. ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲï ಅವರ ಸಂಪುಟಗಳಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು. ಬೇರೆ ಪಕ್ಷಗಳಿಂದ ಆಹ್ವಾನ ಬಂದರೂ ಕೊನೆಯ ದಿನದವರೆಗೂ ಜೆಡಿಎಸ್ ಪಕ್ಷದಲ್ಲೇ ಉಳಿದುಕೊಂಡಿದ್ದರು.

# ಸಂತಾಪ :  ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ಅಮರನಾಥ ಶೆಟ್ಟಿ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ ಎಂದು ಮಾಜಿ ಪ್ರದಾನಿ ಮತ್ತು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಹೇಳಿದ್ದಾರೆ. ಮಾಜಿ ಸಚಿವರು ಮತ್ತು ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿದ್ದ ಅಮರನಾಥ ಶೆಟ್ಟಿಯವರ ನಿಧನದಿಂದ ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದಿದ್ದಾರೆ.

Facebook Comments

Sri Raghav

Admin