ಆರು ರಾಜ್ಯಗಳ ಪ್ರಯಾಣಿಕರಿಗೆ ನಿರ್ಬಂಧ ಹಾಕಿದ ಮಹಾರಾಷ್ಟ್ರ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಏ.19- ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಆರು ರಾಜ್ಯಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ. ಕೇರಳ, ಗೋವಾ, ರಾಜಸ್ಥಾನ, ಗುಜರಾತ್, ದೆಹಲಿ ಮತ್ತು ಉತ್ತರಖಾಂಡ್ ರಾಜ್ಯಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಆದೇಶ ಹೊರಡಿಸಿದ್ದಾರೆ.

ಸರ್ಕಾರ ಘೋಷಣೆ ಮಾಡಿರುವ ಸೂಕ್ಷ್ಮ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ನೆಗಿಟಿವ್ ವರದಿ ತರಬೇಕು ಎಂದು ಸೂಚಿಸಲಾಗಿದೆ. ರೈಲಿನ ಮೂಲಕ ಮಹಾರಾಷ್ಟ್ರಕ್ಕೆ ಆಗಮಿಸುವವರು 48ಗಂಟೆಗೂ ಮುನ್ನ ನೆಗೆಟಿವ್ ವರದಿ ಪಡೆದುಕೊಂಡಿರಲೇಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಬೇರೆ ರಾಜ್ಯಗಳಲ್ಲಿರುವ ರೂಪಾಂತರಿ ವೈರಾಣು ಮಹಾರಾಷ್ಟ್ರಕ್ಕೆ ಬಂದರೆ ಈಗಾಗಲೇ ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ಇಲ್ಲಿನ ಸ್ಥಿತಿ ಮತ್ತಷ್ಟು ಬಿಗಾಡಾಯಿಸಬಹುದು ಎಂಬ ಭೀತಿಯ ಹಿನ್ನಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ.

Facebook Comments