ಸರ್ವರ್ ಸಮಸ್ಯೆ ಬಗೆಹರಿಸಲು ಸಿಎಂಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.19-ಸಾರ್ವಜನಿಕರಿಗೆ ಪಡಿತರ , ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಉಂಟಾಗಿರುವ ಸರ್ವರ್ ಸಮಸ್ಯೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣವೇ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸರ್ಕಾರಿ ಪಡಿತರ ವಿತರಕರ ಸಂಘ ಒತ್ತಾಯಿಸಿದೆ.

ರಾಜ್ಯಾದ್ಯಂತ ಒಂದೇ ಸರ್ವರ್ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪಡಿತರಧಾನ್ಯಗಳನ್ನು ಸಮರ್ಪಕ ರೀತಿಯಲ್ಲಿ ವಿತರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಹಾಗೂ ಕಾರ್ಯದರ್ಶಿ ಎಂ.ಕೆ.ರಾಮಚಂದ್ರ ಒತ್ತಾಯಿಸಿದ್ದಾರೆ.

ಕಳೆದ ಒಂದು ವಾರದಿಂದ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಪಡಿತರಧಾನ್ಯಗಳನ್ನು ವಿತರಿಸಲು ಸಾಧ್ಯವಾಗುತ್ತಿಲ್ಲ. ಪ್ರತಿದಿನ ಫಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎನ್‍ಐಸಿ ರವರು ಸರ್ಕಾರಕ್ಕೆ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸುಮಾರು 4 ಕೋಟಿ 1700000 ಕಾರ್ಡುದಾರರು ಸರ್ವರ್ ಸಮಸ್ಯೆಯಿಂದ ಪಡಿತರವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿಯವರು ಇತ್ತ ಗಮನಹರಿಸಬೇಕೆಂದು ಕೋರಿದ್ದಾರೆ.

Facebook Comments

Sri Raghav

Admin