ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ ಎಂಬುದು ನನ್ನ ಹೆಬ್ಬಯಕೆ : ಹೊರಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಜು.13- ಅಧಿವೇಶನ ಬೆಳಗಾವಿಯಲ್ಲಿ ಆಗಬೇಕು ಎಂಬುದು ನನ್ನ ಹೆಬ್ಬಯಕೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನಸ್ಸು ಮಾಡಿದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವುದು ಸಾಧ್ಯ. ಕಲಾಪಗಳನ್ನು ಸುಸೂತ್ರವಾಗಿ ನಡೆಸುವುದು ಮಾತ್ರ ನಮ್ಮ ಜವಾಬ್ದಾರಿಯಾಗಿದ್ದು, ಸರ್ಕಾರ ನಿರ್ಧಾರ ತಳೆದರೆ ಮಾತ್ರ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಕಾರ್ಯಕ್ರಮ ನಿಮಿತ್ತ ಬೆಳಗಾವಿಗೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕರ್ನಾಟಕದೊಂದಿಗೆ ಸಹಕರಿಸಿದರೆ ಯೋಜನೆಗಳು ಪೂರ್ಣಗೊಳ್ಳುತ್ತವೆ. ಇದರಿಂದ ಪರಸ್ಪರ ಎರಡೂ ರಾಜ್ಯಗಳ ನಾಗರಿಕರಿಗೆ ಸಹಾಯವಾಗುತ್ತದೆ. ತಮಿಳುನಾಡು ರಾಜಕಾರಣಿಗಳು ರಾಜಕೀಯವಾಗಿ ಕರ್ನಾಟಕದೊಂದಿಗೆ ಸಹಕರಿಸಬೇಕಿದೆ ಎಂದು ಮಾರ್ಮಿಕವಾಗಿ ನುಡಿದರು.

ಕರ್ನಾಟಕದ ರಾಜಕಾರಣಿಗಳು, ಉನ್ನತ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಯಾರೇ ಇರಲಿ ಮೇಕೆದಾಟು ಯೋಜನೆ ವಿಷಯದಲ್ಲಿ ಒಂದಾಗುವ ಕಾಲ ಇದು ಎಂದರು.

Facebook Comments