ಶಬರಿಮಲೆ ಎಫೆಕ್ಟ್ , ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ, ಮೇ 23- ದೇವರ ನಾಡು ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯ್ ನೇತೃತ್ವದ ಯುಡಿಎಫ್ ಕ್ಲೀನ್‍ಸ್ವೀಪ್ ಮಾಡಿದೆ.

30 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಕೇರಳದಲ್ಲಿ ಯುಡಿಎಫ್ ಎಲ್ಲ 30 ಸ್ಥಾನಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ ಎನ್‍ಡಿಎ, ಎಲ್‍ಡಿಎಫ್ ಶೂನ್ಯ ಸಾಧನೆ ಮಾಡಿದೆ.

ಕೇರಳದ ವಿಶ್ವವಿಖ್ಯಾತ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್ ತೀರ್ಪಿನ ನಂತರ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರ ಮತ್ತು ಇತರ ವಿದ್ಯಮಾನಗಳಿಂದ ಬಿಜೆಪಿ ಮೇಲೆ ದುಷ್ಪರಿಣಾಮ ಬೀರಿದೆ.  ಶೇ.100ರಷ್ಟು ಫಲಿತಾಂಶದೊಂದಿಗೆ ಕೇರಳದಲ್ಲಿ ಯುಡಿಎಫ್ ಪ್ರಾಬಲ್ಯ ಮುಂದುವರಿದಿದೆ.

ವಯನಾಡಿನಲ್ಲಿ ರಾಹುಲ್‍ ಗೆಲುವು :  ಕೇರಳದ ನಯನ ಮನೋಹರ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದೊಂದಿಗೆ ವಯನಾಡಿನಲ್ಲೂ ತಮ್ಮ ಅದೃಷ್ಟವನ್ನು ಪರೀಕ್ಷೆಗೊಡ್ಡಿದ್ದ ರಾಹುಲ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.

ಕೇರಳ ಕಾಂಗ್ರೆಸ್ ಕೋರಿಕೆ ಮೇರೆಗೆ ವಯನಾಡಿನಲ್ಲಿ ಸ್ಪರ್ಧಿಸಿದ್ದ ರಾಹುಲ್ ದೇವರ ನಾಡಿನಲ್ಲಿ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ. ರಾಹುಲ್‍ಗೆ ವಯನಾಡಿನ ಮುಸ್ಲಿಂ ಪಕ್ಷಗಳು ಮತ್ತು ಇತರ ಸಂಘಟನೆಗಳು ಭಾರೀ ಬೆಂಬಲ ಸೂಚಿಸಿದ್ದವು. ರೋಡ್‍ಶೋ ಮತ್ತು ಚುನಾವಣಾ ಪ್ರಚಾರ ವೇಳೆಯೂ ಎಐಸಿಸಿ ಅಧ್ಯಕ್ಷರಿಗೆ ಭರ್ಜರಿ ಸ್ಪಂದನೆ ಲಭಿಸಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin