ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್‍ ಪವಾರ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.17- ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ನಾಯಕ ಶರದ್‍ಪವಾರ್ ಇಂದು ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿದ ಶರದ್‍ಪವಾರ್ ಅವರು, ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಪಟ್ಟಂತೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಸೋಮವಾರದಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಶರದ್ ಅವರ ಭೇಟಿ ಕುತೂಹಲ ಕೆರಳಿಸಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಂತ್ರಣದ ವೇಳೆ ಬಿಜೆಪಿ ಮತ್ತು ಆಡಳಿತಾರೂಢ ಮಹಾವಿಕಾಸ್ ಅಗಡಿ ಒಕ್ಕೂಟದ ನಡುವೆ ಸಂಘರ್ಷ ಏರ್ಪಟ್ಟಿತ್ತು.

ಅಕ್ರಮವಾಗಿ ಹಣ ವಸೂಲಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಎನ್‍ಸಿಪಿ ನಾಯಕರಾಗಿದ್ದ ಅನಿಲ್‍ದೇಶ್‍ಮುಖ್ ಗೃಹ ಸಚಿವ ಸ್ಥಾವನ್ನು ತೊರೆಯಬೇಕಾಯಿತು. ಆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಕೈಗೊಂಡಿದೆ. ಪ್ರಧಾನಿ ಭೇಟಿ ವೇಳೆ ಶರದ್ ಪ್ರವಾರ್ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.

Facebook Comments