ಸದ್ಯಕ್ಕೆ ಯಾವ ಪಕ್ಷಕ್ಕೂ ಸೇರೊಲ್ಲ: ಶಾಸಕ ಶರತ್

ಈ ಸುದ್ದಿಯನ್ನು ಶೇರ್ ಮಾಡಿ

ಹೊಸಕೋಟೆ, ಡಿ.14- ಸದ್ಯಕ್ಕೆ ಯಾವುದೇ ಪಕ್ಷಕ್ಕೂ ಸೇರುವ ಆತುರದಲ್ಲಿ ನಾನಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದ್ದಾರೆ. ತಾಲ್ಲೂಕಿನ ಬೆಂಡಿಗಾನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಯಾವ ಪಕ್ಷಕ್ಕೂ ಸೇರುವುದಿಲ್ಲ.

ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಅವರನ್ನು ಭೇಟಿಯಾದುದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ. ರಮೇಶ್‍ಕುಮಾರ್ ಮತ್ತು ನಮ್ಮ ಕುಟುಂಬದ ನಡುವೆ ಮೊದಲಿನಿಂದಲೂ ಒಡನಾಟವಿದೆ. ಅವರು ನಮ್ಮ ಆಪ್ತರು. ನನಗೆ ತಂದೆ ಸಮಾನ. ಹಾಗಾಗಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದರು.

ರಮೇಶ್‍ಕುಮಾರ್ ಅವರು ವಿಧಾನಸಭೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದೂ ಸೇರಿದಂತೆ ನನಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಪಾಲಿಸುತ್ತೇನೆ. ಅವರ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಚಿವರಾದ ಕೃಷ್ಣಬೈರೇಗೌಡ ಮತ್ತು ಡಿ.ಕೆ.ಶಿವಕುಮಾರ್ ಅವರನ್ನಾಗಲಿ ನಾನು ನೇರವಾಗಿ ಭೇಟಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಶರತ್ ಉತ್ತರಿಸಿದರು.ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸದ್ಯದಲ್ಲಿಯೇ ಭೇಟಿ ಮಾಡುತ್ತೇನೆ. ಅವರಿಂದಲೂ ಆಶೀರ್ವಾದ ಪಡೆಯುತ್ತೇನೆ ಎಂದು ಅವರು ತಿಳಿಸಿದರು.

Facebook Comments