ರೈತ ಪ್ರತಿಭಟನೆ : 4 ಶತಾಬ್ಧಿ ರೈಲು ಸಂಚಾರ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮಾ.26- ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ರೈಲ್ವೇ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ನಾಲ್ಕು ಶತಾಬ್ದಿ ಎಕ್ಸ್‍ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿ 32 ರೈಲ್ವೆ ನಿಲ್ದಾಣಗಳಲ್ಲಿ ರೈಲು ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವಾರು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ.

ದೆಹಲಿ, ಅಂಬಾಲಾ, ಫೀರೋಜ್‍ಪುರ್ ವಿಭಾಗಗಳ ರೈಲು ಸಂಚಾರ ರದ್ದುಗೊಂಡಿದೆ. ಇದುವರೆಗೂ 31 ರೈಲುಗಳ ಸಂಚಾರಕ್ಕೆ ಆಡಚಣೆಯಾಗಿದ್ದು ನಾಲ್ಕು ಶತಾಬ್ದಿ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್, ಹರಿಯಾಣ, ಉತ್ತರಪ್ರದೇಶದ ಸಾವಿರಾರು ರೈತರು ದೆಹಲಿ ಗಡಿಭಾಗಗಳಲ್ಲಿ ಬೀಡುಬಿಟ್ಟು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ನೀತಿಯನ್ನು ಕೈ ಬಿಡುವಂತೆ ಒತ್ತಾಯಿಸುತ್ತಿದ್ದಾರೆ.

Facebook Comments