ಆಕಸ್ಮಿಕ ಬೆಂಕಿ:100ಕ್ಕೂ ಹೆಚ್ಚು ಕುರಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಆ.1-ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಗುಲಿ 100ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಚಿತ್ರಹಳ್ಳಿ ಪೊಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮೃತಪುರ ಗ್ರಾಮದ ನಿವಾಸಿ ತಿಮ್ಮಪ್ಪ ಎಂಬುವರು ಕುರಿಗಳನ್ನು ಮೇಯಿಸಲೆಂದು ಹೊರಕೆರೆ ದೇವರಪುರ ಗ್ರಾಮದ ಬಳಿ ಇರುವ ಅರಣ್ಯಪ್ರದೇಶಕ್ಕೆ ಬಿಟ್ಟಿದ್ದರು.

ಈ ವೇಳೆ ಆಕಸ್ಮಿಕವಾಗಿ ಅರಣ್ಯಕ್ಕೆ ಬೆಂಕಿ ತಗುಲಿ ಮೇಯಿತ್ತಿದ್ದ ಕುರಿಗಳು ಬೆಂಕಿಗೆ ಸಿಲುಕಿ ಸಾವನ್ನಪ್ಪಿವೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments