ಅಣು ವಿಜ್ಞಾನಿ ಡಾ.ಶೇಖರ್ ಬಸು ಕೊರೊನಾಗೆ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಕೊತಾ, ಸೆ.24- ದೇಶದ ಹಿರಿಯ ಅಣು ವಿಜ್ಞಾನಿ ಡಾ.ಶೇಖರ್ ಬಸು (68) ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಕೋವಿಡ್-19 ಸೋಂಕು ತಗುಲಿತ್ತು.  ಕೊಲ್ಕೊತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು 4.30ರ ನಸುಕಿನಲ್ಲೇ ಕೊನೆಯುಸಿರೆಳೆದರು.

ಭಾರತದ ಅಗ್ರಮಾನ್ಯ ಅಣು ವಿಜ್ಞಾನಿಗಳಲ್ಲಿ ಒಬ್ಬರಾಗಿದ್ದ ಬಸು ಅಣು ಶಕ್ತಿ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.  ಡಾ.ಶೇಖರ್ ಬಸು ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook Comments