ಶಿಡ್ಲಘಟ್ಟದಲ್ಲಿ ಸ್ವಯಂ ಪ್ರೇರಿತ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

ಶಿಡ್ಲಘಟ್ಟ, ಜೂ.22- ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ಪಟ್ಟಣವನ್ನು ಲಾಕ್‍ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬೆಳಗ್ಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವಿರುತ್ತದೆ. ಮಧ್ಯಾಹ್ನದ ವೇಳೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವರ್ತಕರು ತೀರ್ಮಾನಿಸಿದ್ದಾರೆ.

ಮಾಸ್ಕ್ ಹಾಗೂ ಸ್ಯಾನಿಟೇಸರ್ ಅನ್ನು ಬಳಸಲು ಜಾಗೃತಿ ಮೂಡಿಸಲಾಗಿದ್ದು , ಜ್ವರ ಹಾಗೂ ಶೀತದಿಂದ ಬಳಲುತ್ತಿರುವವರು ಮನೆಯಲ್ಲೇ ಇರಬೇಕೆಂದು ಮನವಿ ಮಾಡಲಾಗಿದೆ.
ಇಲ್ಲಿನ ರೇಷ್ಮೆ ಮಾರುಕಟ್ಟೆಯಲ್ಲೂ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ವ್ಯಾಪಾರ ಎಂದಿನಂತೆ ಬೇಕೇ ಬೇಡವೇ ಎಂಬ ಬಗ್ಗೆ ಸದ್ಯದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.

ನೆರೆಯ ಆಂಧ್ರದಲ್ಲಿ ಕೊರೊನಾ ಸೋಂಕು ಹೆಚ್ಚಿರುವುದರಿಂದ ಅಲ್ಲಿಂದ ಬರುವಂತಹವರ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಒಟ್ಟಾರೆ ವರ್ತಕರು ಮತ್ತು ಸ್ಥಳೀಯರು ಸೋಂಕನ್ನು ನಿಯಂತ್ರಿಸುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ವ್ಯಾಪಾರ ವಹಿವಾಟಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ.

Facebook Comments