ಜಿದ್ದಾಜಿದ್ದಿನ ಕಣವಾಗಿದ್ದ ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ವಿರುದ್ದ ಮಧುಬಂಗಾರಪ್ಪ ಸೋಲು

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ,ಮೇ 23- ಜಿದ್ದಾಜಿದ್ದಿನ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದರೊಂದಿಗೆ ತನ್ನ ಪ್ರಾಬಲ್ಯವನ್ನು ಮತ್ತೆ ಮುಂದುವರೆಸಿದೆ.

ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಬಿ.ವೈ.ರಾಘವೇಂದ್ರ ಸುಮಾರು 1,20,000ಕ್ಕೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಿ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಪರಾಭವಗೊಳಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪನವರ ಪುತ್ರ ಮಧುಬಂಗಾರಪ್ಪ ಅವರ ಸ್ಪರ್ಧೆಯಿಂದಾಗಿ ಶಿವಮೊಗ್ಗ ರಾಜ್ಯದ ಗಮನಸೆಳೆದ ಕ್ಷೇತ್ರವಾಗಿತ್ತು. [ LOKSABHA ELECTIONS 2019 RESULT – Live Updates]

ಪ್ರಾರಂಭಿಕ ಸುತ್ತಿನಿಂದಲೂ ಬಿ.ವೈ.ರಾಘವೇಂದ್ರ ಮುನ್ನಡೆ ಕಾಯ್ದುಕೊಂಡು ಅಂತಿಮ ಸುತ್ತಿನಲ್ಲಿ 1,20,000ಕ್ಕೂ ಹೆಚ್ಚಿನ ಮತಗಳಿಂದ ಗೆಲುವಿನ ನಗೆ ಬೀರಿದರು. ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ಪುತ್ರನನ್ನು ಸೋಲಿಸಲೇಬೇಕೆಂದು ದೋಸ್ತಿ ಪಕ್ಷಗಳ ಮುಖಂಡರು ತಮ್ಮದೇ ಆದ ರಣತಂತ್ರ ರೂಪಿಸಿದ್ದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಎಂದೇ ಖ್ಯಾತಿಯಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಉಸ್ತುವಾರಿ ವಹಿಸಿದ್ದರು. ಯಡಿಯೂರಪ್ಪನವರನ್ನು ತವರು ಜಿಲ್ಲೆಯಲ್ಲೇ ಕಟ್ಟಿ ಹಾಕಿದರೆ ಸರ್ಕಾರ ಅಸ್ಥಿರಗೊಳಿಸುವ ಅವರ ಪ್ರಯತ್ನವನ್ನು ವಿಫಲಗೊಳಿಸಬಹುದೆಂಬ ಕಾರಣಕ್ಕಾಗಿಯೇ ಶಿವಮೊಗ್ಗವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದರು. [ LOKSABHA ELECTIONS 2019 RESULT – Live Updates]

ಮೊದಲ ಬಾರಿಗೆ ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ ಮತ್ತು ಮಾಜಿ ಶಾಸಕ ಅಪ್ಪಾಜಿಗೌಡ ಅವರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ದೋಸ್ತಿ ನಾಯಕರು ಯಶಸ್ವಿಯಾಗಿದ್ದರು.

ಆದರೆ ಜಿಲ್ಲೆಯಲ್ಲಿ ಬೇರು ಬಿಟ್ಟಿದ್ದ ಆರ್‍ಎಸ್‍ಎಸ್ ಸಂಘಟನೆ, ಬಿಜೆಪಿ ಕಾರ್ಯಕರ್ತರ ಪರಿಶ್ರಮ ಯಡಿಯೂರಪ್ಪನವರ ಹೋರಾಟ, ನರೇಂದ್ರ ಮೋದಿ ಅಲೆ ಮುಂದೆ ಬಿಜೆಪಿ ಸುಲಭವಾಗಿ ಗೆಲುವು ಸಾಧಿಸಿದೆ. ಈ ಮೂಲಕ ಶಿವಮೊಗ್ಗ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin