ಶಿರಾದಲ್ಲಿ ಶಿರುವಾಗಿದೆ ಎಲೆಕ್ಷನ್ ಕಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.5- ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿಪಡಿಸಿಲ್ಲ, ಆದರೂ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ, ಬಿಜೆಪಿಗೆ ಇಲ್ಲಿ ಯಾವುದೇ ನೆಲೆ ಇಲ್ಲ, ಆದರೆ ಶಿರಾ ಕ್ಷೇತ್ರ, ಬಿಜೆಪಿ ಸಂಸದ ಆನೇಕಲ್ ನಾರಾಯಣ ಸ್ವಾಮಿ ಪ್ರತಿನಿಧಿಸುವ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬಿಜೆಪಿ ನಾಯಕರು ಶಿರಾದಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಿದ್ದಾರೆ.

ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಶಿರಾದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ, ಜೊತೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.

ಇದರ ಜೊತೆಗೆ 2018ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಟಿಬಿ ಜಯಚಂದ್ರ ಕೂಡ ಬೀಡು ಬಿಟ್ಟು ಸಭೆಗಳನ್ನು ನಡೆಸುತ್ತಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಸಕ ದಿವಂಗತ ಸತ್ಯನಾರಾಯಣ ಅವರ 21 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತುಮಕೂರು ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸೋಲಿಸಲು ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ರೆಬೆಲ್ ನಾಯಕ ಕೆಎನ್ ರಾಜಣ್ಣ ಕೂಡ ಪ್ರಾಬಲ್ಯ ಸಾಬೀತುಪಡಿಸಲು ಮತ್ತೊಮ್ಮೆ ಮುಂದಾಗಿದ್ದಾರೆ. ಅಹಿಂದ ನಾಯಕರು ಸಭೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮ್ಮ ಸ್ನೇಹಿತ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಅವರಿಗೆ ಪಕ್ಷ ಟಿಕೆಟ್ ನೀಡಿದರೇ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂಬ ವದಂತಿಗಳಿಗೆ ಅವರು ನಾಂದಿ ಹಾಡಿದ್ದಾರೆ.

Facebook Comments