ಉಗ್ರಪ್ಪ-ಸಲೀಂ ಗುಸುಗುಸು : ಬಿಜೆಪಿ ವ್ಯಂಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.13- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಭ್ರಷ್ಟಾಚಾರದ ಕುರಿತು ಪಕ್ಷದ ಮುಖಂಡರೇ ಮಾಡಿರುವ ಆರೋಪದ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮ ಪಕ್ಷದ ನಾಯಕ ಉಗ್ರಪ್ಪ ಹಾಗೂ ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ ಎಂದು ವ್ಯಂಗ್ಯವಾಡಿದೆ.

ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ? ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ಸೀಸರ್‍ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ. ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇ ಬೇಕಲ್ಲವೇ? ಭ್ರಷ್ಟಾಧ್ಯಕ್ಷ ಎಂದು ವಾಗ್ದಾಳಿ ನಡೆಸಿದೆ.

Facebook Comments