ಸಿಬಿಐ ವಿಚಾರಣೆಗೊ ಮುನ್ನ ಡಿಕೆಶಿ ಕಾರ್ಯಕರ್ತರಿಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.25- ಪಕ್ಷದ ಮುಖಂಡರಿಗಾಗಲಿ, ಕಾರ್ಯಕರ್ತರಿಗಾಗಲಿ ಯಾವುದೇ ರೀತಿಯಲ್ಲೂ ಧಕ್ಕೆಯಾಗುವಂತಹ ಕೆಲಸವನ್ನು ನಾನು ಮಾಡಿಲ್ಲ. ಯಾವುದೇ ಮುಚ್ಚುಮರೆ ಇಲ್ಲದೆ ನಾನು ಸಿಬಿಐ ವಿಚಾರಣೆ ಎದುರಿಸುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೀದರ್ ಪ್ರವಾಸದ ನಂತರ ಬೆಂಗಳೂರಿಗೆ ಆಗಮಿಸಿ ತಮ್ಮ ನಿವಾಸದ ಮುಂದೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಆತಂಕ ಪಡಬೇಕಾಗಿಲ್ಲ. ಎಲ್ಲರಿಗೂ ನಾನು ಮತ್ತೊಮ್ಮೆ ಮನವಿ ಮಾಡುತ್ತೇನೆ. ಸಿಬಿಐ ವಿಚಾರಣೆಗೆ ತೆರಳುವಾಗ ಯಾರೂ ನನ್ನನ್ನು ಹಿಂಬಾಲಿಸಬೇಡಿ ಮತ್ತು ಹೇಳಿಕೆಗಳನ್ನು ನೀಡಬೇಡಿ ಎಂದು ಹೇಳಿದರು.

ಅಕಾರಿಗಳು ಕರೆದಿರುವ ಸಮಯಕ್ಕೆ ನಾನು ಹೋಗಿ ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಕಾನೂನಿನ ಪ್ರಕಾರ ಎಲ್ಲದಕ್ಕೂ ಸ್ಪಂದಿಸುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಯಾರೂ ಕೂಡ ಅನ್ಯಥಾ ಭಾವಿಸಬೇಡಿ ಎಂದು ಮನವಿ ಮಾಡಿದರು.

Facebook Comments