ಜ.19ರಂದು ಶ್ರೀ ಶಿವಕುಮಾರ ಸ್ವಾಮಿಗಳ ಸಂಸ್ಮರಣೋತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಜ.14- ಡಾ.ಶ್ರೀ ಶಿವಕುಮಾರ ಸ್ವಾಮಿ ಗಳ ಪ್ರಥಮ ವರ್ಷದ ಪುಣ್ಯ ಸಂಸ್ಮರಣೋತ್ಸವ ಜ.19ರಂದು ಸಿದ್ದ ಗಂಗಾ ಮಠದಲ್ಲಿ ನಡೆಯಲ್ಲಿದೆ ಎಂದು ಎಸ್‍ಐಟಿ ನಿರ್ದೇಶಕ ಡಾ.ಎಂ.ಎನ್.ಚನ್ನಬಸಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯ್ರಕ್ರಮವನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಸಿಲ್ಲಿದ್ದು, ಶ್ರೀ ಸಿದ್ದಲಿಂಗಸ್ವಾಮಿಜಿಗಳ ನೇತ್ರತ್ವದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಅಧ್ಯಕ್ಷ ತೆಯಲ್ಲಿ ಕಾರ್ಯಕ್ರಮ ನಡೆಯಲ್ಲಿದೆ ಎಂದರು.

ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿಗಳು ಮತ್ತು ಕನಕಪುರ ದೇಗುಲಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜು ಬೊಮ್ಮಾಯಿ,

ಜೆ.ಸಿ.ಮಾಧುಸ್ವಾಮಿ, ಸಿ.ಸಿ.ಪಾಟೇಲ, ಲಕ್ಷ್ಮಣ ಸವದಿ, ಸಿ.ಟಿ.ರವಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭಾಗವಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ದೆಹಲಿಯ ಕೈ ಗಾರಿಕೋದ್ಯಮಿ ಮುಖೇಶ್ ಗರ್ಗ್ ಮತ್ತು ಉಗ್ರ ನಿಗ್ರಹ ದಳದ ಅಧ್ಯಕ್ಷರಾದ ಮಣಿಂದರ್ ಜೀತ್ ಸಿಂಗ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಠದ ಆಡಳಿತ ಅಧಿಕಾರಿ ವಿಶ್ವಾನಾಥಯ್ಯ, ಎಸ್‍ಐಟಿ ಕಾಲೇಜಿನ ಪ್ರಚಾರ್ಯ ಡಾ.ಶಿವಕುಮಾರಯ್ಯ ಮತ್ತಿತರರು ಹಾಜರಿದ್ದರು.

Facebook Comments