ಶಿವಮೊಗ್ಗದ ಮಹಾ ದುರಂತಕ್ಕೆ ಕಾರಣ ಏನು..? ಯಾರು..? ಇಲ್ಲಿದೆ ಕಂಪ್ಲೀಟ್ ಅಪ್ಡೇಟ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.22- ಕಳೆದ ರಾತ್ರಿ ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಸಮೀಪದ ಹುಣಸೋಡು ಗ್ರಾಮದ ಬಳಿ ಕ್ರಷರ್‍ನಲ್ಲಿ ಜಿಲೆಟಿನ್ ಕಡ್ಡಿ ಸೋಟಿಸಿ ಸಂಭವಿಸಿದ ಘಟನೆ ಕುರಿತಂತೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ. ಮತ್ತೊಂದೆಡೆ ಘಟನೆಗೆ ಕಾರಣರು ಎನ್ನಲಾದ ಕ್ರಷರ್ ಮಾಲೀಕ ಸುಧಾಕರ್ ಹಾಗೂ ಜಿಲೆಟಿನ್ ಕಡ್ಡಿ ಪೂರೈಕೆ ಮಾಡುತ್ತಿದ್ದ ನರಸಿಂಹ, ಗಣಿಗಾರಿಕೆಗೆ ಭೂಮಿ ಕೊಟ್ಟಿದ್ದ ಜಮೀನು ಮಾಲೀಕ ಅನಿಲ್ ಕುಲಕರ್ಣಿಯನ್ನು ಸಹ ಪೊಲೀಸರು ಬಂಧಿಸಿವಿಚಾರಣೆಗೊಳಪಡಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಎಚ್ಚರಿಸಿದ್ದಾರೆ. ಘಟನೆ ಕುರಿತಂತೆ ಖುದ್ದು ಪ್ರಧಾನಿ ನರೇಂದ್ರಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವತಿಯಿಂದ ಗಾಯಾಳುಗಳಿಗೆ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೌಡಾಯಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ್ ನಾಯಕ್, ಜಿಲ್ಲಾಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳದಲ್ಲಿಯೇ ಬೀಡುಬಿಟ್ಟಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಂತರವಾಗಿ ಅಕಾರಿಗಳ ಜೊತೆ ದೂರವಾಣಿ ಮೂಲಕ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಘಟನೆಯಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಉನ್ನತ ಮಟ್ಟದ ತನಿಖೆ ನಡೆಸಿ ವರದಿ ನೀಡಬೇಕೆಂದು ಸೂಚನೆ ಕೊಟ್ಟಿದ್ದಾರೆ.

ಶಿವಮೊಗ್ಗದ ರವೀಂದ್ರನಗರ ನಿವಾಸಿಯಾದ ಸುಧಾಕರ್ ಕಳೆದ ಹಲವು ವರ್ಷಗಳಿಂದ ಬಿವಿಎಸ್ ಸ್ಟೋನ್ ಕ್ರಷರ್ ನಡೆಸುತ್ತಿದ್ದರು. ಮೂರು ವರ್ಷಗಳ ಮಟ್ಟಿಗೆ ಜಿಲ್ಲಾಡಿತ ಪರಾವನಗಿ ನೀಡಿತ್ತು.ಕಳೆದ ರಾತ್ರಿ ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿಯ ಕ್ರಷರ್ನಲ್ಲಿ ಜಿಲೆಟಿನ್ ಕಡ್ಡಿ ಸೋಟಗೊಂಡು, ಕ್ರಷರ್‍ನಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು, ಸ್ಪೋಟದಲ್ಲಿ ಮೃತಪಟ್ಟವರು ಎಷ್ಟು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ನಡೆದ ಸ್ಥಳದಲ್ಲಿ ಎಲ್ಲೆಂದರಲ್ಲಿ ಛಿದ್ರವಾದ ದೇಹದ ಚೂರುಗಳು ಕಾಣಿಸುತ್ತಿದ್ದು, ಹುಣಸೋಡು ಗ್ರಾಮದ ಬಳಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎಂದು ಗ್ರಾಮಸ್ಥರು ದೂರಿದ್ದಾರೆ.ಜಿಲೆಟಿನ್ ಕಡ್ಡಿಗಳನ್ನು ಸಾಗಣೆ ಮಾಡುತ್ತಿದ್ದ ವಾಹನದಲ್ಲಿ ಸೋಟ ಉಂಟಾಗಿದೆ. ಈ ಸೋಟದ ಕಾರಣ ಸ್ಪೋಟಕ ಸಾಮಾಗ್ರಿಗಳ ಸಾಗಣೆಗೆ ಜಿಲ್ಲಾಡಳಿತ ಕೆಲವು ದಿನಗಳ ತನಕ ನಿಷೇಧ ಹೇರುವ ಸಾಧ್ಯತೆ ಇದೆ. ಇದರಿಂದಾಗಿ ನಿರ್ಮಾಣ ಕ್ಷೇತ್ರದಲ್ಲಿನ ಕಾಮಗಾರಿ ಕುಂಠಿತವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಿವಮೊಗ್ಗ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರ ಒಂದು ಭಾಗವಾಯಿಯೇ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ಈ ಸೋಟದಿಂದಾಗಿಯೇ ಭಾರೀ ಬೆಳಕು ಮತ್ತು ಶಬ್ದ ಬಂದಿದೆ ಎಂದು ಊಹಿಸಲಾಗುತ್ತಿದೆ. ರಾತ್ರಿ 10.30ರ ಸುಮಾರಿಗೆ ಶಿವಮೊಗ್ಗ ಕೇಂದ್ರವಾಗಿರಿಸಿಕೊಂಡು ಈ ಸೋಟ ಸಂಭವಿಸಿತು. ಆದರೆ, ಆ ಬಳಿಕ ಈ ಸೋಟದ ಮೂಲ ತಿಳಿಯಿತು.

ಘಟನೆ ನಡೆದ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕತ್ತಲು ಆವರಿಸಿದೆ. ಶಿವಮೊಗ್ಗ ಸುತ್ತಮುತ್ತ ಅಕ್ರಮ ಗಲ್ಲು ಗಣಿಗಾರಿಕೆ ಸಾಕಷ್ಟು ಪ್ರಮಾಣದಲ್ಲಿ ನಡೆಯುತ್ತಿದ್ದು, ಕೆಲವೊಮ್ಮೆ ದಾಳಿ ಕೂಡ ನಡೆದಿತ್ತು. ಆದರೂ ಇದನ್ನು ಮೀರಿ ಈ ರೀತಿಯ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಸ್ಥಳೀಯರು ಬದಲಾಗಿ ಬಿಹಾರಿ ಕಾರ್ಮಿಕರನ್ನೇ ಹೆಚ್ಚಾಗಿ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಹೀಗಾಗಿ ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಬಿಹಾರಿ ಕಾರ್ಮಿಕರೇ ಹೆಚ್ಚಾಗಿದ್ದಾರೆಂದು ಹೇಳಲಾಗುತ್ತಿದೆ.

Facebook Comments

Sri Raghav

Admin