ಶಿವರಾಮ್ ಹೆಬ್ಬಾರ್ ಕಾರು ಅಪಘಾತ, ಸಿಎಂ ಭೇಟಿ ವೇಳೆ ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ.

ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ.

ಆದರೇ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Facebook Comments

Sri Raghav

Admin