ಸಮರ್ಥ ಮತ್ತು ಸ್ಥಿರ ಸರ್ಕಾರ ನಿಶ್ಚಿತ : ಶೋಭಾ ಕರಂದ್ಲಾಜೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.26- ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿ.ಎಸ್. ಯಡಿ ಯೂರಪ್ಪ ದಕ್ಷ , ಸಮರ್ಥ ಮತ್ತು ಸ್ಥಿರ ಸರ್ಕಾರ ನೀಡುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಸ್ಪಷ್ಟ ಬಹುಮತವಿದ್ದು , ವಿಶ್ವಾಸಮತ ಸಾಬೀತು ಪಡಿಸುವಲ್ಲಿ ಯಾವುದೇ ಅನುಮಾನವಿಲ್ಲ. ಕೇಂದ್ರದ ಬಿಜೆಪಿ ವರಿಷ್ಠರು ಮತ್ತು ಯಡ್ಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ ಅವರು ಕೇಂದ್ರದ ಬಿಜೆಪಿ ಮುಖಂಡರಿಂದ ಸೂಚನೆ ಬಂದ ನಂತರವೇ ಬಿಎಸ್‍ವೈ ಅವರು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ. ಕೇಂದ್ರದ ನಾಯಕರಿಗೆ ಯಡ್ಯೂರಪ್ಪ ಅವರ ಮೇಲೆ ಸಂಪೂರ್ಣ ಭರವಸೆ ಇದೆ ಎಂದು ಕರಂದ್ಲಾಜೆ ಹೇಳಿದರು.

Facebook Comments