ಕುಮಾರಸ್ವಾಮಿಯವರೇ ಬೆಂಕಿ ಹಚ್ಚುವ ಕೆಲಸ ಮಾಡ್ಬೇಡಿ : ಶೋಭಾ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ, ಜ.10- ಮಂಗಳೂರಿನಲ್ಲಿ ಸದ್ಯ ಶಾಂತ ಸ್ಥಿತಿ ಇದೆ. ಹೀಗಿರುವಾಗ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದು ಸಂಸದರಾದ ಶೋಭಾಕರಂದ್ಲಾಜೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರಿಗೆ ಈಗ ಮಾಡಲು ಏನೂ ಕೆಲಸ ಇಲ್ಲ. ಅದಕ್ಕಾಗಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಇಷ್ಟು ದಿನಗಳ ಕಾಲ ಸುಮ್ಮನಿದ್ದು ಈಗ ಏಕಾಏಕಿ ಮಂಗಳೂರಿನ ಗಲಭೆ ಕುರಿತು ವಿಡಿಯೋ ಬಿಡುಗಡೆ ಮಾಡುವ ಮೂಲಕ ಬೆಂಕಿ ಹಚ್ಚುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇದು ಸರಿಯಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು.

Facebook Comments