ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ : ಶೋಭಾ ಕರಂದ್ಲಾಜೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಸೆ.11- ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಆದ್ಯತೆ ಮೇರೆಗೆ ಗ್ರಾಮಗಳ ರಸ್ತೆ, ಸೇತುವೆ ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ನೆರಡಿ ಗ್ರಾಮದಲ್ಲಿ ಅಂಬಳೆ, ಕದ್ರಿಮಿದ್ರಿ, ತಿರುಗುಣಾ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಗ್ರಾಮಗಳ ಅಭಿವೃದ್ಧಿಗಾಗಿ ಕಳಸ ಎಸ್.ಕೆ.ಮೆಗಾಲ್ ರಸ್ತೆ , ಸೇತುವೆ ನಿರ್ಮಾಣಕ್ಕೆ 10.50 ಕೋಟಿ, ಬಂಕೇನಹಳ್ಳಿ, ಪಲ್ಗುಣಿ ಮೂಲಕ ಎರಕಲ್ಲು ರಸ್ತೆ ಸಂಪರ್ಕಕ್ಕೆ 7.50 ಕೋಟಿ ವೆಚ್ಚದ ಕಾಮಗಾರಿಗೆ ಹಾಗೂ ಅಂಬಳೆ, ತಿರುಗುಣ, ನೆರಡಿ ರಸ್ತೆ ಸಂಪರ್ಕಕ್ಕೆ 10.50 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಕೆಲವು ವರ್ಷಗಳಿಂದ ಈ ಯೋಜನೆಯಡಿ ಯಾವುದೇ ಕಾಮಗಾರಿಗಳನ್ನು ಕೈಗೊಂಡಿರಲಿಲ್ಲ ಈದೀಗ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಪ್ರಧಾನಮಂತ್ರಿಗಳು, ಕೇಂದ್ರ ಭೂ ಸಾರಿಗೆ ಸಚಿವರು ಸೂಕ್ತ ಅನುದಾನ ನೀಡುತ್ತಿದ್ದಾರೆ ಎಂದರು. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ತಾಪಂ ಸದಸ್ಯರಾದ ಮಹೇಶ್, ರಮೇಶ್, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Facebook Comments