‘ದುಡ್ಡಿನ ಆಮಿಷಕ್ಕೆ ಒಳಗಾಗುವ ದರಿದ್ರ ಬಂದಿಲ್ಲ’ ಶೋಭಾ ಕರಂದ್ಲಾಜೆ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಮೇ 15- ರಾಜ್ಯದಲ್ಲಿ ಕಾಂಗ್ರೆಸ್ ನವರ ಕೊಡುಗೆ ಶೂನ್ಯ. ಕಾಂಗ್ರೆಸ್ ನವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಪತನವಾಗುತ್ತೆ ಎಂದು ನಾವು ಹೇಳಿಲ್ಲ, ಅವರ ಶಾಸಕರೇ ಹೇಳುತ್ತಿದ್ದಾರೆ.

ಉಮೇಶ ಜಾಧವ್ 50 ಕೋಟಿಗೆ ಡೀಲ್ ಆಗಿದ್ದಾರೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಉಮೇಶ ಜಾದವ್ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರು. ಅವರಿಗೆ ದುಡ್ಡಿನ ಆಮಿಷಕ್ಕೆ ಒಳಗಾಗುವ ದರಿದ್ರ ಬಂದಿಲ್ಲ. ಮೈತ್ರಿ ಸರ್ಕಾರದ ಒಳಜಗಳದಿಂದಾಗಿ ಅವರು ಬಿಜೆಪಿಗೆ ಬಂದಿದ್ದಾರೆ ಎಂದರು.

ಡಿಕೆಶಿ ಅವರು ಇಲ್ಲಿಗೆ ಬಂದು ನಮ್ಮ ಪಕ್ಷದ ಕಾರ್ಯಕರ್ತರನ್ನ ಖರೀದಿ ಮಾಡಲು ನಿಂತಿದ್ದಾರೆ.ಅವರು ಖರೀದಿ ಮಾಡಿ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಆದರೆ ಅವರ ದುಡ್ಡಿಗೆ ಇಲ್ಲಿ ಯಾರೂ ಖರೀದಿಗೆ ಸಿದ್ಧರಿಲ್ಲ. ಮೈತ್ರಿ ಸರ್ಕಾರದ ಶಾಸಕರು ಯಾವಾಗ ರಾಜೀನಾಮೆ ಕೊಡುತ್ತಾರೆ ಆವಾಗ ಅವರನ್ನ ಮಾತನಾಡಿಸುತ್ತೇವೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ