ಶಾರ್ಟ್ ಸಕ್ರ್ಯೂಟ್‍ನಿಂದಾಗಿ 17 ಮಳಿಗೆಗಳು ಭಸ್ಮ, 20 ಕೋಟಿ ನಷ್ಟ..!

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ,ಫೆ.8- ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿ 17 ಅಂಗಡಿಗಳು ಸುಟ್ಟು ಭಸ್ಮಗೊಂಡು 20 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿರುವ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೆಳಗಿನ ಜಾವ ನಡೆದಿದೆ. ಇಳಕಲ್‍ನ ಬಸವೇಶ್ವರ ವೃತ್ತದಲ್ಲಿರುವ ಚಂದ್ರಶೇಖರ್ ಸಜ್ಜನ್ ಎಂಬುವರಿಗೆ ಸೇರಿದ 5 ಅಂತಸ್ತಿನ ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಸೂಪರ್ ಮಾರ್ಕೇಟ್, ಹಾರ್ಡ್‍ವೇರ್, ಬೇಕರಿ, ಇಳಕಲ್ ಸೀರೆ ಅಂಗಡಿ, ಪೀಟರ್ ಇಂಗ್ಲೆಂಡ್ ಬಟ್ಟೆ ಶೋರೂಂ ಸೇರಿ 17 ಮಳಿಗೆಗಳು ಆಹುತಿಯಾಗಿವೆ.

ಈ ಕಟ್ಟಡದಲ್ಲಿದ್ದ ಹಾರ್ಡ್‍ವೇರ್ ಅಂಗಡಿಯಲ್ಲಿ ಉಂಟಾದ ಶಾರ್ಟ್‍ಸಕ್ರ್ಯೂಟ್‍ನಿಂದ ಈ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಈ ಘಟನೆಯಿಂದ ಸುಮಾರು 20 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸುದ್ದಿ ತಿಳಿದ ತಕ್ಷದ ಗುಳೇದಗುಡ್ಡ, ಕುಷ್ಟಗಿ, ಇಳಕಲ್, ಹುನಗುಂದ, ಬಾಗಲಕೋಟೆ ಭಾಗದಿಂದ 8 ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಇಳಕಲ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments