ಶೋರೂಂನಲ್ಲಿ ಬೆಂಕಿ, ಎರಡು ಕಾರುಗಳಿಗೆ ಹಾನಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.23- ಕಾರ್ ಶೋರೂಂವೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಒಂದು ಕಾರು ಸಂಪೂರ್ಣ ಸುಟ್ಟು ಹಾನಿಯಾಗಿದ್ದರೆ, ಮತ್ತೊಂದು ಕಾರು ಭಾಗಶಃ ಹಾನಿಯಾಗಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲು ಗೇಟ್ ಬಳಿಯ ಕಟ್ಟಡದ ಎರಡನೆ ಮಹಡಿಯಲ್ಲಿ ಕಾರ್ ಶೋರೂಂ ಇದ್ದು, ತಡರಾತ್ರಿ 11.45ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸುದ್ದಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರಾದರೂ ಬೆಂಕಿಯ ತೀವ್ರತೆಯಿಂದಾಗಿ ಶೋರೂಂನಲ್ಲಿದ್ದ ಒಂದು ಕಾರು ಸಂಪೂರ್ಣ ಸುಟ್ಟು ಹಾನಿಯಾಗಿದ್ದರೆ, ಮತ್ತೊಂದು ಕಾರು ಶೇ.50ರಷ್ಟು ಭಾಗ ಸುಟ್ಟಿದೆ.  ಶಾರ್ಟ್ ಸಕ್ರ್ಯೂಟ್‍ನಿಂದ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಬಂಡೆಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೆಜಿ ಹಳ್ಳಿ: ಕಚೇರಿಯೊಂದರಲ್ಲಿ ಅಳವಡಿಸಿದ್ದ ಯುಪಿಎಸ್‍ನಿಂದ ಬೆಂಕಿ ಕಾಣಿಸಿಕೊಂಡು ಕೆಲ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಜಿ ಹಳ್ಳಿಯ ಕೆಂಪಯ್ಯ 3ನೆ ಬ್ಲಾಕ್‍ನಲ್ಲಿನ ಕಚೇರಿಯಲ್ಲಿ ಇಂದು ಬೆಳಗಿನ ಜಾವ 2.40ರ ಸುಮಾರಿಗೆ ಯುಪಿಎಸ್‍ನಿಂದ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ.

ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

Facebook Comments