ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್‍ಗೆ ಡೆಂಘೀ, ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಡಿ.10- ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ್ ಪಾಟೀಲ್ ಅವರು ಡೆಂಘೀ ಜ್ವರದಿಂದ ಬಳಲುತ್ತಿದ್ದು, ಅವರನ್ನು ಮಹಾರಾಷ್ಟ್ರದ ಸಾಂಗ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ್ ಪಾಟೀಲ್ ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ಹೆಚ್ಚಿನ ಪ್ರದೇಶಗಳಲ್ಲಿ ಡೆಂಘೀ ಜ್ವರ ಸಾಮಾನ್ಯವಾಗಿತ್ತು. ಮುಂಜಾಗೃತಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು.

ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬಿದ್ದಿದೆ. ಕಾಗವಾಡ ವಿಧಾನಸಭಾ ಕ್ಷೇತ್ರ ಸಹ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಶ್ರೀಮಂತ್ ಪಾಟೀಲ್ ಪರ ಮತದಾರರು ತೀರ್ಪು ನೀಡಿದ್ದಾರೆ. ಕಾಂಗ್ರೆಸ್‌ನ ರಾಜು ಕಾಗೆ ಮತ್ತು ಜೆಡಿಎಸ್‌ನ ಶ್ರೀಶೈಲ ತುಗಶೆಟ್ಟಿ ವಿರುದ್ಧ ಶ್ರೀಮಂತ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.

Facebook Comments