ಆರೋಪಿ ಆತ್ಮಹತ್ಯೆ ಪ್ರಕರಣದಲ್ಲಿ ಸಬ್‍ ಇನ್ಸ್ಪೆಕ್ಟರ್ ಸಸ್ಪೆಂಡ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.27- ಪೊಲೀಸರ ವಶದಲ್ಲಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಸಿದಂತೆ ಸಬ್‍ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ತಿಳಿಸಿದರು.

ವಿವೇಕನಗರ ಪೊಲೀಸ್ ಠಾಣೆಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಮೇಲ್ನೋಟಕ್ಕೆ ಕಂಡುಬಂದಿದೆ ಎಂದರು.

ಘಟನೆ ಸಂದರ್ಭದಲ್ಲಿ ನಾಲ್ವರು ಪೊಲೀಸರು ಜತೆಯಲ್ಲಿದ್ದರು. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣವನ್ನು ಸಿಒಡಿಗೆ ವರ್ಗಾವಣೆ ಮಾಡಲಾಗುವುದು ಎಂದು ಕಮಲ್‍ಪಂಥ್ ಅವರು ಹೇಳಿದರು.

Facebook Comments

Sri Raghav

Admin