“ಎಸ್‌ಎಸ್‌ಲ್‌ಸಿ ಪರೀಕ್ಷೆ ಎಷ್ಟು ಯಶಸ್ವಿಯಾಗಿದೆ ಎಂಬುದು ತಿಳಿಯಲು ಇನ್ನು 15 ದಿನಗಳ ಕಾಲ ಕಾಯಬೇಕಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.4-ಎಸ್‌ಎಸ್‌ಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಸರ್ಕಾರ ನಡೆಸಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಇನ್ನು 15 ದಿನಗಳ ಕಾಲ ಕಾಯಬೇಕಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಸುರಕ್ಷಿತವಾಗಿ ನಡೆದಿದೆ ಎಂದು ಎಲ್ಲರೂ ವಿಶ್ವಾಸ ಹೊಂದಿದ್ದಾರೆ. ಕರಾರುವಕ್ಕಾದ ಫಲಿತಾಂಶ ಬರಲು ಇನ್ನು 15 ದಿನ ಕಾಯಕಬೇಕು.

ಅತಿಯಾದ ಆತ್ಮವಿಶ್ವಾಸದಿಂದ ಕರ್ನಾಟಕ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿದೆ. ಹಾಗೂ ಸುರಕ್ಷಿತವಾಗಿಯೂ ಮುಗಿದಿದೆ ಎಂದು ಪ್ರಚಾರ ಮಾಡಲಾಗುತ್ತಿದೆ.

ನನ್ನ ಬಲವಾದ ಸಲಹೆ ಏನೆಂದರೆ ಜೂನ್ 15ರಿಂದ ಜುಲೈ 20ರ ನಡುವೆ ಪತ್ತೆಯಾಗಿರುವ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳು ಎಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕಿದೆ.

ಅದರಿಂದ ಸೋಂಕು ಎಷ್ಟರಮಟ್ಟಿಗೆ ಹರಡಿದೆ, ಹರಡಿಲ್ಲ ಎಂಬುದನ್ನು ನಿರ್ಧರಿಸಲು ಸಾದ್ಯವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Facebook Comments