ಬಾದಾಮಿ ಕ್ಷೇತ್ರದಲ್ಲಿ ನೆರೆ ಮುನ್ನೆರಿಕೆ ವಹಿಸಲು ಡಿಸಿಗೆ ಸಿದ್ದರಾಮಯ್ಯ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.9- ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸದ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಯವರು ವಿವರಿಸಿದರು.ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು.

ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಅವರು ಸೂಚಿಸಿದರು.ಕೊರೊನಾ ಕುರಿತಾಗಿ ತಹಶೀಲ್ದಾರರಿಂದ ಮಾಹಿತಿ ಪಡೆದುಕೊಂಡ ಸಿದ್ದರಾಮಯ್ಯ ಅವರು, ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.

# ಕೊರೋನಾದಿಂದ ಶೀಘ್ರ ಗುಣಮುಖರಾಗುವಂ ಸಿದ್ದುಗೆ ರಾಹುಲ್ ಶುಭ ಹಾರೈಕೆ  : 
ಬೆಂಗಳೂರು, ಅ.9- ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಯವರು ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಗಾಂಯವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲï ಅವರೂ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

Facebook Comments

Sri Raghav

Admin