ಲಸಿಕಾ ಅಭಿಯಾನಕ್ಕೆ ಸಿದ್ದು ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.16- ಕೊರೊನಾ ವಿರುದ್ಧದ ಲಸಿಕಾ ಆಂದೋಲನ ಆರಂಭವಾಗಿರುವುದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿನಂದನೆ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಾದ್ಯಂತ ಲಸಿಕಾ ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಕೊರೊನಾ ವಿರುದ್ಧ ರಾಷ್ಟ್ರೀಯ ಲಸಿಕಾಆಂದೋಲನ ಆರಂಭಿಸಿರುವ ಎಲ್ಲರಿಗೂ ಅಭಿನಂದನೆಗಳು.

ಈ ಆಂದೋಲನ ಯಶಸ್ವಿಯಾಗಲಿದೆ. ಜನರ ಪ್ರಾಣ ಕಾಪಾಡಲಿದೆ ಮತ್ತು ದೇಶದ ಜನರ ಜೀವನವನ್ನು ಸಹಜ ಸ್ಥಿತಿಗೆ ತರಲಿದೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದ್ದಾರೆ. ತಮ್ಮ ಟ್ವಿಟ್‍ನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯಾರ ಹೆಸರನ್ನು ಉಲ್ಲೇಖಿಸದೆ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

Facebook Comments