ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟನೆ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಜೂ.27- ಬಾಕಿ ಉಳಿದಿರುವ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಮುಗಿಸಬೇಕು. ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಬೇಕಾಗಿದೆ. ಅದಕ್ಕಾಗಿ ನಿನ್ನೆ ಬೂತ್ ಮಟ್ಟದ ಮೀಟಿಂಗ್ ಮಾಡಿದ್ದೇವೆ. ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಎರಡು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಹೀಗಾಗಿ ಮೈತ್ರಿಯಲ್ಲಿ ಸಣ್ಣ ಪುಟ್ಟ ಅಸಮಾಧಾನ ಉಂಟಾಗುವುದು ಸಹಜ. ನಿನ್ನೆ ನಡೆದ ಸಭೆಯಲ್ಲಿ ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಸೋಲಿಗೆ ಮೈತ್ರಿಯೂ ಕಾರಣ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಅಂಶವೊಂದೇ ಕಾರಣವಲ್ಲ ಎಂದು ಹೇಳಿದರು.

ಸೋಲಿನ ಬಗ್ಗೆ ಪರಾಮರ್ಶೆ ಮಾಡಲಾಗಿದೆ. ಮುಂದೆ ಪಕ್ಷವನ್ನು ಸಂಘಟಿಸುವ ಬಗ್ಗೆ ಹೊಸ ರೂಪು ರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಮಧ್ಯಂತರ ಚುನಾವಣೆ ಮಾಡುವುದು ಸೂಕ್ತ ಎಂದು ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದ ಸಿದ್ದು ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ. ಕೆಲವರಿಗೆ ದಿವ್ಯ ಜ್ಞಾನವಿರುತ್ತದೆ. ಆ ಜ್ಞಾನ ನಮಗಿಲ್ಲ ಎಂದು ಹೇಳಿದರು.

ಮೋದಿಗೆ ಮತ ಹಾಕುತ್ತೀರಾ. ಕೆಲಸಕ್ಕೆ ನಮ್ಮ ಹತ್ತಿರ ಬರುತ್ತೀರ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಗೊತ್ತಿಲ್ಲದೇ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಈಗಾಗಲೇ ಅದಕ್ಕೆ ಅವರು ಕ್ಷಮೆ ಕೂಡ ಕೇಳಿದ್ದಾರೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ