ಹದಗೆಟ್ಟ ಪರಿಸ್ಥಿತಿಯಲ್ಲಿ ಸಿಎಂ ಸ್ಥಾನ ಬಯಸಲ್ಲ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.12- ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡಿ ರಾಜಕೀಯ ಪರಿಸ್ಥಿತಿ ಹದಗೆಟ್ಟಿರುವ ಸಂದರ್ಭದಲ್ಲಿ ಮುಖ್ಯ ಮಂತ್ರಿಯಾಗಲು ಬಯಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ಆಪ್ತ ವಲಯದಲ್ಲಿ ಮಾತನಾಡುವ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬಹು ಮತವಿಲ್ಲ. ಬಹುಮತವಿಲ್ಲದಿರುವಾಗ ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ ಎಂದು ತಮ್ಮ ಆಪ್ತ ಬಳಗಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

ವಿಧಾನಸಭೆಗೆ ಚುನಾವಣೆ ನಡೆದು ನಮ್ಮ ಪಕ್ಷಕ್ಕೆ ಬಹುಮತ ಬಂದರೆ ಆಗ ನೋಡೋಣ ಎಂದು ಹೇಳಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರ ತೂಗುಯ್ಯಾಲೆಯಲ್ಲಿರುವ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ಮಾಡಿ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ಕುರಿತಂತೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ರಾಜ್ಯದ ಆಡಳಿತ ನಿರ್ವಹಿಸಿದ ತೃಪ್ತಿ ಇದೆ. ಮತ್ತೆ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಬೇಕೆಂಬ ಅಪೇಕ್ಷೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ವದಂತಿಗೆ ಸಂಬಂಧಿಸಿದಂತೆ ಅವರು ತಮ್ಮ ಆಪ್ತ ವಲಯದಲ್ಲಿ ಈ ಮಾತನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ