ನೆರೆ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ : ಸಿದ್ದರಾಮಯ್ಯ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ಬಾದಾಮಿ,ಆ.21- ನೆರೆ ಹಾವಳಿ ಬಂದು ಜನರು ಸಂಕಷ್ಟಕ್ಕೀಡಾಗಿದ್ದರೂ ಸರ್ಕಾರ ಯಾವುದೇ ಪರಿಹಾರ ಕಾರ್ಯ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಬಿಡಿಗಾಸನ್ನೂ ಕೊಡದೆ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗಿದೆ. ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದ ಅವರು, ಜನರೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ. ನೆರೆ ಹಾವಳಿ ನಿರ್ವಹಣೆಯಲ್ಲಿ ಸಿಎಂ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರು ಕಾಟಾಚಾರಕ್ಕೆ ವೀಕ್ಷಣೆ ಮಾಡಿ ಹೋಗಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಪರಿಹಾರ ಕಾರ್ಯದಲ್ಲಿ ಯಾವುದೇ ರಾಜಕೀಯ ಮಾಡಬಾರದು. ಇದು ಸರಿಯಲ್ಲ ಎಂದರು. ಸಿದ್ದರಾಮಯ್ಯನವರು ಕ್ಷೇತ್ರದ ವಿವಿಧೆಡೆ ಸಂಚರಿಸಿ ನಿರಾಶ್ರಿತರ ಅಹವಾಲುಗಳನ್ನು ಸ್ವೀಕರಿಸಿ ಸರ್ಕಾರಕ್ಕೆ ಒತ್ತಡ ತಂದು ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ