ಜೆಡಿಎಸ್ ಮುಖಂಡರ ಮನೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ…!

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.16-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿಯೆಂದು ಜೆಡಿಎಸ್ ಮುಖಂಡರು ಹಾಗೂ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಅವರು ನಮ್ಮ ಮನೆಗೆ ಬಂದ ವಿಷಯದಲ್ಲಿ ಯಾವುದೇ ರಾಜಕೀಯ ಇಲ್ಲ. ಸಿದ್ದರಾಮಯ್ಯನವರು ಒಳ್ಳೆಯ ಕೆಲಸಗಾರರು, ಅವರು ಮತ್ತೆ ಸಿಎಂ ಆಗಬೇಕು ಎಂದರು.

ಯಾರೇ ಎಲ್ಲೇ ಕೆಲಸ ಮಾಡಿದರೂ ನಾನು ಅವರನ್ನು ಬೆಂಬಲಿಸುತ್ತೇನೆ ಎಂದ ಅವರು, ನಾನು ಈಗ ರಾಜಕೀಯವಾಗಿ ಸಕ್ರಿಯವಾಗಿಲ್ಲ. ಚುನಾವಣೆಯಲ್ಲಿ ಸೋತನಂತರ ನನ್ನನ್ನು ಜೆಡಿಎಸ್ ಸಮರ್ಥವಾಗಿ ಬಳಸಿಕೊಂಡಿಲ್ಲ. ನಾನೀಗ ಮುಕ್ತನಾಗಿದ್ದೇನೆ ಎಂದು ವಿವರಿಸಿದರು. ಯಾರು ನನ್ನನ್ನು ಗೌರವದಿಂದ ಕಂಡು ನನ್ನ ಅನುಭವ ಬಳಸಿಕೊಳ್ಳುತ್ತಾರೆ ಅವರ ಪರವಾಗಿ ನಾನು ಇರುತ್ತೇನೆ ಎಂದು ರಂಗಪ್ಪ ತಿಳಿಸಿದರು.

ಚಾಮರಾಜ ಕ್ಷೇತ್ರದಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ರಂಗಪ್ಪ ಅನಂತರ ಜೆಡಿಎಸ್‍ನೊಂದಿಗೆ ಗುರುತಿಸಿಕೊಂಡಿರಲಿಲ್ಲ.  ಇತ್ತೀಚೆಗೆ ಮೈಸೂರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಂದಿದ್ದಾಗಲೂ ಅವರನ್ನು ಭೇಟಿ ಮಾಡಿರಲಿಲ್ಲ.

ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಂಗಪ್ಪ ಅವರ ಮನೆಗೆ ತೆರಳಿ ಅವರೊಂದಿಗೆ ಉಪಹಾರ ಸೇವಿಸಿ ಮಾತುಕತೆ ನಡೆಸಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Facebook Comments