ಡಿನೋಟಿಫಿಕೇಷನ್ ಪ್ರಕರಣ : ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.23- ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನಾಲ್ಕು ವಾರಗಳ ತಡೆ ನೀಡಿ, ಪ್ರತಿವಾದಿ ಗಂಗಾರಾಜ್ ಎಂಬುವರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿದೆ.

1997ರಲ್ಲಿ ಡಿಸಿಎಂ ಆಗಿದ್ದ ಮೂಡಾದಿಂದ ಡಿನೋಟಿಫೈ ಆಗಿದ್ದ ಮೈಸೂರಿನ ವಿಜಯನಗರದಲ್ಲಿ 10 ಗುಂಟೆ ಜಮೀನು ಖರೀದಿಸಿ ಪಕ್ಕದ ಸ್ವಲ್ಪ ಜಾಗವನ್ನು ಅತಿಕ್ರಮಿಸಿ ಮನೆ ನಿರ್ಮಾಣ ಮಾಡಿ ಅದನ್ನು 2003ರಲ್ಲಿ ಮಾರಾಟ ಮಾಡಿದ್ದಾರೆ ಗಂಗಾರಾಜ್ ಎಂಬುವರು ಆರೋಪಿಸಿದ್ದರು.

ಈ ಪ್ರಕರಣವನ್ನು ರದ್ದು ಮಾಡಬೇಕೆಂದು ಕೋರಿ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಸಿದ್ದರಾಮಯ್ಯನವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ