ಅಯೋಧ್ಯೆ ತೀರ್ಪು : ಶಾಂತಿ ಕಾಪಾಡುವಂತೆ ಸಿದ್ದರಾಮಯ್ಯ ಟ್ವಿಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.9-ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಶಾಂತಿ ಕಾಪಾಡಬೇಕು ಎಂದು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಸಾರ್ವಜನಿಕರಲ್ಲಿ ನಿರಂತರವಾಗಿ ಮನವಿ ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವ್ಯಾಜ್ಯದ ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸೋಣ.

ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ, ಶಾಂತಿ ಸೌಹಾರ್ದತೆ ಕಾಪಾಡೋಣ ಎಂದು ಮನವಿ ಮಾಡಿ ಮಾಡಿಕೊಂಡಿದ್ದಾರೆ.  ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್‍ನಲ್ಲಿ ಎಲ್ಲಾ ವರ್ಗದ ಜನರು ಶಾಂತಿ ಕಾಪಾಡಲು ಸಹಕರಿಸಬೇಕು. ಸುಪ್ರೀಂಕೋರ್ಟ್‍ನ ತೀರ್ಪನ್ನು ಗೌರವಿಸೋಣ. ನ್ಯಾಯಾಂಗದ ಸಾರ್ವಭೌಮತ್ವವನ್ನು ಕಾಪಾಡೋಣ.

ತೀರ್ಪು ಏನೇ ಬಂದರೂ ಅದನ್ನು ಸಮಚಿತ್ತದಿಂದ ಸ್ವೀಕರಿಸೋಣ ಎಂದು ಸಲಹೆ ನೀಡಿದೆ. ಪಕ್ಷದ ವಿವಿಧ ಹಂತದ ನಾಯಕರು ಶಾಂತಿ ಕಾಪಾಡಲು ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.

Facebook Comments