ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.30-ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರಚಾರದ ವೇಳೆ ಜಾತಿ ನಿಂದನೆ ಪದವನ್ನು ಬಳಸಿದ್ದು, ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ರಾಜ್ಯಾಧ್ಯಕ್ಷ ತ್ಯಾಗರಾಜ್, ಹರಿಹರದ ಕುಮಾರಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಟೀಕಿಸುವ ಭರದಲ್ಲಿ ಜಾತಿ ನಿಂದನೆ ಪದವನ್ನು ಬಳಸಿರುವುದು ನಮ್ಮ ಸಮಾಜದ ಬಂಧುಗಳಿಗೆ ಮಾಡಿದ ಅಪಮಾನವಾಗಿದೆ. ಆದ್ದರಿಂದ ಈ ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಯಡಿಯೂರಪ್ಪನವರು ಈ ಹಿಂದೆ ಸವಿತಾ ಸಮಾಜದ ಜಾತಿ ನಿಂದನೆ ಪದ ಬಳಸಿದರೆ ಶಿಕ್ಷಿಸುವ ಕಾನೂನು ತರುತ್ತೇವೆ ಎಂದು ಹೇಳಿದ್ದರು. ಈಗಾಗಲೇ ರಾಜಕಾರಣಿಗಳು, ಸಾರ್ವಜನಿಕರು ಈ ಪದವನ್ನು ಬಳಕೆ ಮಾಡಿ ಪದೇ ಪದೇ ನೋವುಂಟು ಮಾಡುತ್ತಿದ್ದಾರೆ. ಆದುದರಿಂದ ಮುಖ್ಯಮಂತ್ರಿಗಳು ಕೂಡಲೇ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ನೀಡಿರುವ ಜಾತಿನಿಂದನೆ ಕಾನೂನು ವರದಿಯನ್ನು ಜಾರಿಗೆ ತರಬೇಕೆಂದು ಮನವಿ ಮಾಡಿದರು.

Facebook Comments