ರಮೇಶ್ ಅವರನ್ನು ಪಕ್ಷಕ್ಕೆ‌ ಸೇರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡ್ತೇವೆ : ಸಿದ್ದು ಟ್ವೀಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.6- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಲೆ ಕೆಟ್ಟಿದೆ. ಅವರ ತಲೆ ಸರಿಹೋಗಿ ಸಂಪೂರ್ಣ ಗುಣಮುಖರಾದ ಮೇಲೆ ಮರಳಿ ಕಾಂಗ್ರೆಸ್ ಸೇರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಬಿಜೆಪಿ ಎನ್ನುವುದು ತಲೆಕೆಡಿಸುವ ಕಾರ್ಖಾನೆ. ಅವರು ನಮ್ಮ ಜತೆ ಇದ್ದಾಗ ಸರಿಯಾಗಿದ್ದರು. ಈಗ ಬಿಜೆಪಿಗೆ ಹೋಗಿ ಅಲ್ಲಿದ್ದವರಾಗಿಯೇ ಆಗಿಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮಿಂದ ಯಾರೂ ಬಿಜೆಪಿ ಸೇರಲ್ಲ. ರಮೇಶ್ ಸಂಪೂರ್ಣ ಗುಣಮುಖರಾದ ನಂತರ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಟ್ವಿಟ್ ಮಾಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

Facebook Comments