ನಾಳೆ ಸಿದ್ದರಾಮಯ್ಯ ಡಿಸ್‍ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.13-ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗುವ ಸಾಧ್ಯತೆ ಇದೆ. ಹೃದಯ ರಕ್ತ ನಾಳಗಳ ಸಮಸ್ಯೆಯಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಬುಧವಾರ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ರಕ್ತನಾಳಕ್ಕೆ ಆಂನಿಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಸಲಾಗಿದೆ.

ಯಾವುದೇ ಬಳಲಿಕೆ ಇಲ್ಲದೆ ಲವಲವಿಕೆಯಿಂದಿರುವ ಸಿದ್ದರಾಮಯ್ಯ ಅವರನ್ನು ನಿನ್ನೆಯೇ ಡಿಸ್‍ಚಾರ್ಜ್ ಮಾಡಬೇಕಾಗಿತ್ತು. ಆದರೆ, ಮನೆಗೆ ಹೋದರೆ ನೋಡಲು ಬರುವವರ ಸಂಖ್ಯೆ ಹೆಚ್ಚಾಗುತ್ತದೆ. ವಿಶ್ರಾಂತಿ ಇಲ್ಲದಂತಾಗುತ್ತದೆ ಎಂಬ ಕಾರಣಕ್ಕಾಗಿ ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದೂ ಆಸ್ಪತ್ರೆಯಲ್ಲೇ ಉಳಿಯುವ ಸಿದ್ದರಾಮಯ್ಯ ಅವರು ನಾಳೆ ಮನೆಗೆ ತೆರಳುವ ಸಾಧ್ಯತೆಗಳಿವೆ.

Facebook Comments