ಸಿದ್ದರಾಮಯ್ಯನವರ ವಿರುದ್ಧದ ಕೇಸ್ ಮಡಿಕೇರಿಯಿಂದ ಮೈಸೂರಿಗೆ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.23- ಕೊಡವರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವು ಇದೀಗ ಮೈಸೂರು ಅಶೋಕಪುರಂ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದೆ.

ಕಳೆದ ವರ್ಷ ಡಿ.18ರಂದು ಅರವಿಂದ ನಗರದ ಕಾಲಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮ ಜನಾಕಾರ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯನವರು ಕೊಡವರು ಸಹ ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿದ್ದರು. ಹೀಗೆ ಹೇಳಿರುವುದು ಕೊಡವ ಜನಾಂಗದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ.

ಉದ್ದೇಶಪೂರ್ವಕವಾಗಿ ಪ್ರಚೋದನಾ ಭಾಷಣ ಮಾಡಿದ್ದಾರೆಂದು ಆರೋಪಿಸಿ ಶಾಂತಿಯೇಂಡ ರವಿ ಕುಶಾಲಪ್ಪ ಎಂಬುವವರು ಐಪಿಸಿ ಸೆಕ್ಷನ್ 153ರಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಘಟನೆಯು ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Facebook Comments

Sri Raghav

Admin