”ನನಗೇಕೋ ಇವಿಎಂಗಳ ಮೇಲೆಯೇ ಡೌಟ್” ಎಂದ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜೂ.3-ಬಿಜೆಪಿಯವರು ಇವಿಎಂ ಮಾನ್ಯುಪಲೇಟ್ ಮಾಡುತ್ತಾರೆ ಎಂಬ ಅನುಮಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದ ಬಳಿಕ ಮತ್ತಷ್ಟು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎಲ್ಲೆಲ್ಲಿ ಬಿಜೆಪಿ ಲೀಡ್ ಬಂದಿತ್ತೋ, ಅಲ್ಲೆಲ್ಲ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇವಿಎಂ ಮೇಲಿನ ಅನುಮಾನವನ್ನು ಪುಷ್ಟೀಕರಿಸಿದೆ ಎಂದು ಹೇಳಿದರು.

ಪ್ರತಿ ಬಾರಿ ಚುನಾವಣೆಯಲ್ಲಿ ಜನರು ಸ್ಥಳೀಯ ವಿಚಾರಗಳ ಮೇಲೆ ಮತ ಹಾಕುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ದೇಶದ ಬಗ್ಗೆ ಗಮನಹರಿಸಿ ಮತ ಹಾಕಿದ್ದರು. ಸ್ಥಳೀಯ ಚುನಾವಣೆಗಳೇ ಸ್ಥಳೀಯರ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೊಟ್ಟಿದ್ದಾರೆ. ಪ್ರತಿ ಚುನಾವಣೆ ಫಲಿತಾಂಶದಲ್ಲೂ ವ್ಯತ್ಯಾಸವಿದೆ.

ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವ್ಯತ್ಯಾಸವಿರುತ್ತದೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin