ಅಹಿಂದ ಮುಖಂಡರ ಜೊತೆ ಸಿದ್ದರಾಮಯ್ಯ ಗುಪ್ತ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01
ಬೆಂಗಳೂರು, ಜೂ.27-ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಹಿಂದ ಮುಖಂಡರು ಭೇಟಿ ಮಾಡಿದ್ದಾರೆ. ಕಳೆದ 12 ದಿನಗಳಿಂದ ಚಿಕಿತ್ಸೆಗಾಗಿ ಧರ್ಮಸ್ಥಳದಲ್ಲಿರುವ ಸಿದ್ದರಾಮಯ್ಯ ಅವರನ್ನು ಇಂದು ಅಹಿಂದದ ಕೆಲ ಮುಖಂಡರು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಹಿಂದ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ಸಿದ್ದರಾಮಯ್ಯ ಅವರ ಈ ನಡೆ ಕುತೂಹಲ ಮೂಡಿಸಿದೆ.

ಇಂದು ಚಿಕಿತ್ಸೆಯನ್ನು ಮುಗಿಸಿದ ಬಳಿಕ ಸಿದ್ದರಾಮಯ್ಯ ಅವರು ಸಚಿವ ರಮೇಶ್ ಜಾರಕಿ ಹೊಳಿ ನೇತೃತ್ವದಲ್ಲಿ ಆಗಮಿಸಿದ್ದ ಮುಖಂಡರೊಂದಿಗೆ ರಹಸ್ಯ ಸಭೆ ನಡೆಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಚಿವ ಎಚ್.ಆಂಜನೇಯ ಕೆಲ ಕಾಲ ರಹಸ್ಯ ಸಭೆಯಲ್ಲಿ ಪಾಲ್ಗೊಂಡು ನಂತರ ಅಲ್ಲಿಂದ ಹಿಂತಿರುಗಿದ್ದಾರೆ. ನಾಳೆ ನಗರಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಆರೋಗ್ಯ ವಿಚಾರಿಸಲು ಭೇಟಿ:
ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿ ಹೊಳಿ ತಂಡ ಅವರ ಆರೋಗ್ಯ ವಿಚಾರಿಸಿದೆ. ರಮೇಶ್ ಜಾರಕಿ ಹೊಳಿ ನೇತೃತ್ವದಲ್ಲಿ 9 ಮಂದಿ ಶಾಸಕರು ತೆರಳಿದ್ದು, ಅವರ ಆರೋಗ್ಯ ವಿಚಾರಿಸಲು ಹೋಗುತ್ತಿದ್ದೇವೆ. ವಿಶೇಷವೇನೂ ಇಲ್ಲ ಎಂದು ಸುದ್ದಿಗಾರರಿಗೆ ಹೇಳಿದರು. ಯಾವುದೇ ವಿಚಾರದಲ್ಲಿ ನಾವು ಚರ್ಚೆ ಮಾಡುವುದಿಲ್ಲ. ಬಜೆಟ್ ಬಗ್ಗೆ ಸಿದ್ದರಾಮಯ್ಯ ನಿರ್ಧರಿಸುತ್ತಾರೆ ಎಂದು ರಮೇಶ್ ಜಾರಕಿ ಹೊಳಿ ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin